Bengaluru, ಏಪ್ರಿಲ್ 13 -- Yuddhakaanda Trailer: ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ 'ಯುದ್ಧಕಾಂಡ' ಚಿತ್ರವು ಏಪ್ರಿಲ್‍ 18ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಭಾನುವಾರ ಬಿಡುಗಡೆಯಾಗಿದೆ. ಹಿರಿಯ ನಟ- ನಿರ್ದೇಶಕ ರವಿಚಂದ್ರನ್‍ ಶಂಖ ಊದುವ ಮೂಲಕ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಅಷ್ಟೇ ಅಲ್ಲ, ಈ ಸಂದರ್ಭದಲ್ಲಿ ಚಿತ್ರದ ಮೊದಲ ಐದು ಟಿಕೆಟ್‍ಗಳನ್ನು ಖರೀದಿಸುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ರವಿಚಂದ್ರನ್, 'ನಾನು ಬರುವಾಗ ಅಜೇಯ್‍ ಅವರ ಒಂದಿಷ್ಟು ಸಂದರ್ಶನಗಳನ್ನು ನೋಡಿಕೊಂಡು ಬಂದೆ. ಕೆಲವು ಸಂದರ್ಶನಗಳಲ್ಲಿ ಸಾಲ ಮಾಡಿದ್ದೇನೆ ಎಂದು ಅಜೇಯ್‍ ಹಲವು ಬಾರಿ ಹೇಳಿಕೊಂಡಿದ್ದಾರೆ. ಅದನ್ನು ಕೇಳಿ ನನಗೆ ನನ್ನ ಸಾಲದ ನೆನಪಾಯಿತು. ಇಲ್ಲಿ ಸಾಲ ತೀರಿಸುವ ತಾಕತ್ತು ಬೇಕು. ಇಷ್ಟಕ್ಕೂ ಸಾಲ ಮಾಡಿದ್ದೀನಿ ಎಂದು ಯಾಕೆ ಹೇಳ್ತೀಯಾ. ನಾನು ಕೋಟಿಗಟ್ಟಲೆ ಹಾಕಿ ಸಿನಿಮಾ ಮಾಡಿದವನು. ನನಗೆ ದುಡ್ಡು ದುಡ್ಡಿನ ಬೆಲೆ ಆಗಲೂ ಗೊತ್ತಿಲ್ಲ. ಈಗಲೂ ಗೊತ್ತಿಲ್...