Bengaluru, ಮೇ 24 -- ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಮಹಿಳೆಯರ ಅನುಮತಿಯಿಲ್ಲದೆ ವಿವಿಧ ಸಂದರ್ಭದಲ್ಲಿ ಅವರ ಫೋಟೋಗಳು ಮತ್ತು ವೀಡಿಯೊಗಳನ್ನು ಸೆರೆಹಿಡಿದು ಇನ್ಸ್ಟಾಗ್ರಾಮ್ ಖಾತೆಗೆ ಪೋಸ್ಟ್ ಮಾಡುತ್ತಿದ್ದ ಆರೋಪದ ಮೇಲೆ 27 ವರ್ಷದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಹಾವೇರಿ ಜಿಲ್ಲೆಯ ದಿಗಂತ್ ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ಪೀಣ್ಯ ಪ್ರದೇಶದಲ್ಲಿ ಶುಕ್ರವಾರ ಬಂಧಿಸಲಾಗಿದೆ. ಆರೋಪಿಯು @metro_chicks ಎಂಬ ಖಾತೆಯಲ್ಲಿ ಮಹಿಳೆಯರ ಆಕ್ಷೇಪಾರ್ಹ ಮತ್ತು ಖಾಸಗಿತನಕ್ಕೆ ಧಕ್ಕೆಯಾಗುವ ರೀತಿಯಲ್ಲಿ, ಫೋಟೊ ಮತ್ತು ವಿಡಿಯೊಗಳನ್ನು ಸೆರೆಹಿಡಿದು ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ. ಇದಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾದ ಎರಡು ದಿನಗಳ ನಂತರ ಆತನ ಬಂಧನವಾಗಿದೆ.
ಆರೋಪಿ ಬಂಧನದ ಬಗ್ಗೆ ಮಾಹಿತಿ ನೀಡಿದ ಉಪ ಪೊಲೀಸ್ ಆಯುಕ್ತ (ದಕ್ಷಿಣ) ಲೋಕೇಶ್ ಬಿ ಜಗಲಾಸರ್, ಪ್ರಾಥಮಿಕ ತನಿಖೆಯಲ್ಲಿ ವ್ಯಕ್ತಿಯು ಖಾಸಗಿ ಸಂಸ್ಥೆಯ ಲೆಕ್ಕಪತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.