Mysuru, ಮೇ 24 -- ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಹಾರಂಗಿ ನಾಲೆ ಕೆಳ ಭಾಗದಲ್ಲಿ ಭಾರೀ ಗಾತ್ರದ ಹುಲಿಯೊಂದು ಮೃತಪಟ್ಟಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗಿರುವ ನಾಲೆಯಲ್ಲಿ ನಾಲ್ಕು ವರ್ಷ ಪ್ರಾಯದ ಗಂಡು ಹುಲಿ ಜೀವ ಬಿಟ್ಟಿದೆ. ನಾಗರಹೊಳೆ ಭಾಗದಲ್ಲಿ ಆಗಾಗ ಬೇಟೆಗಾರರ ಸದ್ದು ಕೇಳಿ ಬರುತ್ತಿದ್ದು. ಇದು ಕೂಡ ಬೇಟೆಗಾರರ ದಾಳಿಗೆ ಬಲಿಯಾಗಿದೆಯೋ ಅಥವಾ ಬೇರೆ ಕಾರಣಕ್ಕೆ ಸಾವು ಆಗಿದೆಯೋ ಎನ್ನುವ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಅರಣ್ಯ ಇಲಾಖೆ ಈಗಾಗಲೇ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿದೆ.ಮರಣೋತ್ತರ ಪರೀಕ್ಷೆಗೆ ಕಾಯಲಾಗುತ್ತಿದ್ದು, ನಂತರ ನಿಖರ ಕಾರಣ ತಿಳಿದು ಬರಲಿದೆ ಎಂದು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಖಚಿತಪಡಿಸಿದರು
Published by HT Digital Content Services with permission from HT Kannada....
Click here to read full article from source
To read the full article or to get the complete feed from this publication, please
Contact Us.