Bengaluru, ಜನವರಿ 29 -- Nagavalli Bangale Teaser: ವಿಭಿನ್ನ ಕಂಟೆಂಟ್ ಹೊಂದಿರುವ ಹಾರರ್ ಜಾನರ್ ಚಿತ್ರ ನಾಗವಲ್ಲಿ ಬಂಗಲೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ ಬಿಡುಗಡೆಯಾಯಿತು. ಶಾಸಕ ಕೆ.ಗೋಪಾಲಯ್ಯ ಹಾಗೂ ಲಹರಿ ವೇಲು ಚಿತ್ರದ ಟೀಸರ್ ಹಾಗೂ ಪೋಸ್ಟರ್ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು.

"ನಾಗವಲ್ಲಿ ಬಂಗಲೆ" ಚಿತ್ರದಲ್ಲಿ ಅರಿಷಡ್ವರ್ಗಗಳಾದ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ ಈ ಆರು ಗುಣಗಳನ್ನು ಪ್ರತಿನಿಧಿಸುವ ಆರು ಮುಖ್ಯಪಾತ್ರಗಳಿರುತ್ತವೆ. ಆರು ಜನ ಹುಡುಗಿಯರು ಈ ಆರು ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಆರು ಪಾತ್ರಗಳು "ನಾಗವಲ್ಲಿ ಬಂಗಲೆ" ಪ್ರವೇಶಿಸಿದಾಗ ಏನೆಲ್ಲಾ ಆಗುತ್ತದೆ ಎಂಬುದೇ ಚಿತ್ರದ ಕಥಾ ಹಂದರ ಎಂದು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಜೆ.ಎಂ.ಪ್ರಹ್ಲಾದ್ ತಿಳಿಸಿದರು.‌

ಇದನ್ನೂ ಓದಿ: ಮಹಾ ಕುಂಭ ಮೇಳದಲ್ಲಿ ಪ್ರಕಾಶ್ ರಾಜ್ ಪುಣ್ಯ ಸ್ನಾನ, AI ಫೋಟೋ ವೈರಲ್‌; ಪಿಸ್ತೂಲ್​ಗಾಗಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ನಮ್ಮ ಆಫೀಸ್‌ನಲ್ಲಿ ನಾನು ಹಾಗೂ ಜೆ.ಎಂ. ಪ್...