ಭಾರತ, ಮಾರ್ಚ್ 15 -- ಮುಂಬರುವ 18ನೇ ಆವೃತ್ತಿಯ ಐಪಿಎಲ್ ಆವೃತ್ತಿಯಲ್ಲಿ ಅಜಿಂಕ್ಯ ರಹಾನೆ ನಾಯಕನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕೋಲ್ಕತಾ ನೈಟ್ ರೈಡರ್ಸ್ ತಂಡ 2025ರ ಐಪಿಎಲ್ ಟೂರ್ನಿಗೆ ರಹಾನೆ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಿದೆ. 2019ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕರಾಗಿದ್ದ ರಹಾನೆ, ಅದಾದ ಬಳಿಕ ಇದೇ ಮೊದಲ ಬಾರಿಗೆ ಮತ್ತೆ ಕ್ಯಾಪ್ಟನ್ ಆಗಿದ್ದಾರೆ. ವೆಂಕಟೇಶ್ ಅಯ್ಯರ್ ಈ ಪಾತ್ರಕ್ಕೆ ಮುಂಚೂಣಿಯಲ್ಲಿದ್ದರು. ಆದರೆ, ಅವರಿಗೆ ಉಪನಾಯಕತ್ವ ಪಟ್ಟ ಸಿಕ್ಕಿದೆ.
ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಕಳೆದ ಋತುವಿನಲ್ಲಿ 3ನೇ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಆದರೆ, ಮೆಗಾ ಹರಾಜಿಗೆ ಶ್ರೇಯಸ್ ತಂಡ ತೊರೆದರು. ಭಾರತದ ಸ್ಟಾರ್ ಬ್ಯಾಟರ್ ಅಜಿಂಕ್ಯ ರಹಾನೆ ಐಪಿಎಲ್ 2025ರ ಮೊದಲ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿದ ಬೆನ್ನಲ್ಲೇ ಹೊಸ ಇತಿಹಾಸ ನಿರ್ಮಿಸಲಿದ್ದಾರೆ. ಇದರೊಂದಿಗೆ ರಹಾನೆ ಮೂರು ವಿಭಿನ್ನ ತಂಡಗಳನ್ನು ಮುನ್ನಡೆಸಿದ ಮೊದಲ ಭಾರತೀಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರ...
Click here to read full article from source
To read the full article or to get the complete feed from this publication, please
Contact Us.