Bangalore, ಫೆಬ್ರವರಿ 22 -- ಪ್ರತಿಯೊಂದು ರಾಶಿಗೂ ಅದರದ್ದೇ ಆದ ಅಧಿಪತಿ ಇದ್ದು, ಪಾಪ-ಪುಣ್ಯಗಳಿಗೆ ಅನುಸಾರವಾಗಿ ಗ್ರಹಗತಿಗಳು ಕರ್ಮ ಫಲಗಳನ್ನು ನೀಡುತ್ತಾರೆ. ನಾಳೆ ಯಾವ ರಾಶಿಯವರಿಗೆ ಶುಭ? ಯಾರಿಗೆ ಅಶುಭ? ಎಂಬುದನ್ನು ನೋಡೋಣ. ನಾಳೆಯ ದಿನ ಭವಿಷ್ಯ ಹೀಗಿದೆ.

ಮೇಷ ರಾಶಿ: ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವ್ಯವಹಾರವು ಲಾಭದಾಯಕವಾಗಿ ಮುಂದುವರಿಯುತ್ತದೆ. ದೈನಂದಿನ ಚಟುವಟಿಕೆಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯುತ್ತವೆ. ನೌಕರರು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿರ್ವಹಿಸುತ್ತಾರೆ. ಅಧಿಕಾರಿಗಳಿಂದ ನಿಮಗೆ ಅನುಕೂಲ ದೊರೆಯಲಿದೆ. ವಿವಾಹಕ್ಕಾಗಿ ಮಾಡುವ ಶುಭ ಪ್ರಯತ್ನಗಳು ಫಲ ನೀಡುತ್ತವೆ. ಆರ್ಥಿಕವಾಗಿ ಏರಿಳಿತಗಳು ಉಂಟಾಗುತ್ತವೆ.

ವೃಷಭ ರಾಶಿ: ವೃತ್ತಿ ಮತ್ತು ವ್ಯವಹಾರಗಳು ಒಟ್ಟಿಗೆ ಬರುತ್ತವೆ. ಅಧ್ಯಾತ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೀರಿ. ಆದಾಯದ ಮೂಲಗಳು ಹೆಚ್ಚುತ್ತವೆ. ಈ ಹಿಂದೆ ಸ್ಥಗಿತಗೊಂಡಿದ್ದ ಕೆಲಸಗಳು ಮತ್ತೆ ಮುಂದುರಿಯುತ್ತವೆ. ಕೆಲಸ ಕಾರ್ಯಗಳಲ್ಲಿ ವಿಳಂಬವಾಗುವ ...