Bangalore, ಏಪ್ರಿಲ್ 23 -- ಬೆಂಗಳೂರು: ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಏಪ್ರಿಲ್‌ 24 ರಿಂದ ಮೇ 8 ರವರೆಗೆ ನಡೆಯುವ ಎರಡನೇ ಹಂತದ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಕರ್ನಾಟಕ ಶಾಲಾ ಶಿಕ್ಷಣ ಮೌಲ್ಯ ನಿರ್ಣಯ ಮಂಡಳಿಯು ಸಿದ್ದತೆಯನ್ನು ಮಾಡಿಕೊಂಡಿದೆ. ಈ ನಿಮಿತ್ತ ಪರೀಕ್ಷಾ ಕೇಂದ್ರಗಳ ಸುತ್ತಲು 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶ ಎಂದು ಘೋಷಿಸಿ ಆಯಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಎರಡನೇ ಹಂತದ ದ್ವಿತೀಯ ಪಿಯುಸಿ ಪರೀಕ್ಷೆಯು ಏ. 24 ರಿಂದ ಮೇ 8 ರ ವರೆಗೆ ಬೆಳಿಗ್ಗೆ 10 ಗಂಟೆ ಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ನಿಷೇಧಾಜ್ಞೆ ಜಾರಿಯನ್ವಯ ಪರೀಕ್ಷಾ ಕೇಂದ್ರಗಳ ಸುತ...