ಭಾರತ, ಏಪ್ರಿಲ್ 7 -- ಬೆಂಗಳೂರು: ನಾಳೆ (ಏಪ್ರಿಲ್‌ 8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12:30ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು 1:30ಕ್ಕೆ ವೆಬ್‌ಸೈಟ್‌ ಮೂಲಕ ಫಲಿತಾಂಶ ವೀಕ್ಷಿಸಬಹುದು. ಮಧ್ಯಾಹ್ನ ಸಚಿವ ಮಧು ಬಂಗಾರಪ್ಪ ಅವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೋಷ್ಠಿ ಮೂಲಕ ಫಲಿತಾಂಶ ಪ್ರಕಟಿಸಲಿದ್ದಾರೆ. ಅದರ ಬೆನ್ನಲ್ಲೇ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಿರಲಿದೆ.

ಫಲಿತಾಂಶ ಪ್ರಕಟವಾದ ನಂತರ, ಪರೀಕ್ಷೆಗಳಿಗೆ ಹಾಜರಾದ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು ಅಧಿಕೃತ ವೆಬ್‌ಸೈಟ್ kseab.karnataka.gov.inನಲ್ಲಿ ಪರಿಶೀಲಿಸಬಹುದು.

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್‌ 1ರಿಂದ 20ರವರೆಗೆ ನಡೆದಿದ್ದವು. ಎಲ್ಲಾ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಮುಗಿದಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಕರ್ನಾಟಕ ದ್ವಿತೀಯ ಪಿಯುಸಿ ಅಂಕಪಟ್ಟಿಯಲ್ಲಿ ಅಭ್...