ಭಾರತ, ಮೇ 18 -- ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ನಾಲಗೆ ಹರಿಬಿಟ್ಟು, ಇದೀಗ ಸೋಷಿಯಲ್ ಮೀಡಿಯಾದಲ್ಲಿ ಟೀಕಾಕಾರರ ಬಾಯಿಗೆ ಆಹಾರವಾಗಿದ್ದಾರೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಅವರನ್ನು ಹೊಗಳಿ ಅಟ್ಟಕ್ಕೇರಿಸುವ ಬರದಲ್ಲಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಧೋನಿಗೆ ಹೋಲಿಸಿದರೆ ಭಾರತದ ಉಳಿದ ಕ್ರಿಕೆಟಿಗರ ಅಭಿಮಾನಿ ಬಳಗದ ಬಗ್ಗೆ ಹರ್ಭಜನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇದು ಮಾಜಿ ಸ್ಪಿನ್ನರ್ ಮೇಲೆ ಆಕ್ರೋಶದ ಮಳೆ ಹರಿಯಲು ಕಾರಣವಾಗಿದೆ. ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಹಾಗೂ ಅವರ ಅಭಿಮಾನಿಗಳನ್ನು ಗುರಿಯಾಗಿಸಿಕೊಂಡು ಈ ರೀತಿ ಹೇಳಿದ್ದಾರೆ ಎಂದು ಅಭಿಮಾನಿಗಳು ಆರೋಪಿಸಿದ್ದಾರೆ.
ಐಪಿಎಲ್‌ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಂದ್ಯ ನಡೆಯಬೇಕಿದ್ದ ಸಮಯದಲ್ಲಿ ಹರ್ಭಜನ್ ಈ ಹೇಳಿಕೆ ನೀಡಿದ್ದಾರೆ. ಸ್ಟಾರ್ ಸ್ಪೋರ್ಟ್‌ನಲ್ಲಿ ಮಾತನಾಡಿದ ಅವರು, ಐಪಿಎಲ್‌ನಲ್ಲಿ ಧೋನಿ ಮತ್ತು ಅವರ ಭವಿಷ್ಯದ ಕುರಿತು ವಿವರಿಸಿದರು.
43 ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.