ಭಾರತ, ಜೂನ್ 17 -- ವಾಸ್ತುವನ್ನು ಅನುಸರಿಸುವುದರಿಂದ, ಸಕಾರಾತ್ಮಕ ಶಕ್ತಿ ಹೆಚ್ಚಾಗುತ್ತದೆ ಮತ್ತು ನಕಾರಾತ್ಮಕ ಶಕ್ತಿ ದೂರವಾಗುತ್ತದೆ. ಮನೆಯಲ್ಲಿರುವ ಎಲ್ಲಾ ಸಮಸ್ಯೆಗಳು ಸಹ ನಿವಾರಣೆಯಾಗುತ್ತವೆ. ವಾಸ್ತು ಶಾಸ್ತ್ರವನ್ನು ಪಾಲಿಸುವುದರಿಂದ ಯಾವುದೇ ತೊಂದರೆಗಳು ಉಂಟಾಗುವುದಿಲ್ಲ ಮತ್ತು ನಿಮ್ಮ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಕಾರಾತ್ಮಕ ಶಕ್ತಿಯನ್ನು ಕಾಣಬಹುದು. ಇದರಿಂದ ನೆಮ್ಮದಿಯ ಜೀವನ ನಡೆಸಬಹುದು. ಆದರೆ ನಾವು ಮಾಡುವ ಕೆಲವು ತಪ್ಪುಗಳು ಬಹಳಷ್ಟು ಹಾನಿಯನ್ನುಂಟುಮಾಡಬಹುದು. ತಿಳಿಯದೆ ಮಾಡುವ ತಪ್ಪುಗಳಿಂದಲೂ ನಷ್ಟವನ್ನು ಎದುರಿಸಬೇಕಾಗಬಹುದು.

ಮನೆಕೆಲಸಗಳನ್ನು ಮಾಡುವಾಗ ನಾವು ಕೆಲವು ತಪ್ಪುಗಳನ್ನು ಮಾಡದಂತೆ ನೋಡಿಕೊಳ್ಳಬೇಕು. ಇಲ್ಲವಾದರೆ ಸಣ್ಣ ತಪ್ಪುಗಳು ದೊಡ್ಡ ಸಮಸ್ಯೆಗಳಿಗೆ ಕಾರಣವಾಗಬಹುದು. ಸಾಮಾನ್ಯವಾಗಿ ನಾವೆಲ್ಲರೂ ಪ್ರತಿದಿನ ಬಟ್ಟೆ ಒಗೆಯುತ್ತೇವೆ. ಸ್ವಚ್ಛತೆಯ ಕಡೆಗೆ ಗಮನ ಕೊಡುವುದು ಒಳ್ಳೆಯ ಅಭ್ಯಾಸವೂ ಹೌದು. ಆದರೆ ದಿನದ ಕೆಲವು ಸಮಯದಲ್ಲಿ ಬಟ್ಟೆ ಒಗೆಯುವುದರಿಂದ ಋಣಾತ್ಮಕ ಪರಿಣಾಮಗಳು ಉಂಟಾಗುತ್ತದೆ ಎಂದ...