ಭಾರತ, ಏಪ್ರಿಲ್ 18 -- ಕಳೆದ ವರ್ಷ ಪ್ರೇಮ್‍ ಹುಟ್ಟುಹಬ್ಬದ ಸಂದರ್ಭದಲ್ಲಿ ಹೊಸ ಚಿತ್ರದ ಮುಹೂರ್ತವಾಗಿತ್ತು. ಈ ಚಿತ್ರದಲ್ಲಿ ಅವರು ಪುನಃ ಖಡಕ್‍ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇತ್ತು. ಈ ಚಿತ್ರ ಇದೀಗ ಯಾವ ಹಂತದಲ್ಲಿದೆಯೋ ಗೊತ್ತಿಲ್ಲ. ಇದೀಗ ಪ್ರೇಮ್‍ ಇನ್ನೊಂದು ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ.

ಪ್ರೇಮ್‍ ಇಂದು (ಏಪ್ರಿಲ್‍ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಅವರು ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿರುವ ಸುದ್ದಿ ಬಂದಿದೆ. ಪಾತ್ರಗಳ ಆಯ್ಕೆಯಲ್ಲಿ ಸಖತ್‍ ಚ್ಯೂಸಿಯಾಗಿರುವ ಪ್ರೇಮ್‍, ಇದೀಗ ಹೊಸ ಚಿತ್ರದಲ್ಲಿ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಉಪೇಂದ್ರ ಅಣ್ಣನ ಮಗ ನಿರಂಜನ್‌ ಸುಧೀಂದ್ರ ಅಭಿನಯದ 'ಸ್ಪಾರ್ಕ್' ಎಂಬ ಚಿತ್ರ ಎರಡು ತಿಂಗಳುಗಳ ಹಿಂದೆ ಪ್ರಾರಂಭವಾಗಿತ್ತು. ಈಗ ಈ ಚಿತ್ರದಲ್ಲಿ ಪ್ರೇಮ್‍ ಸಹ ಒಂದು ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.

ಇದನ್ನೂ ಓದಿ: ವಿದೇಶಿ ಹುಡುಗನ ...