Bengaluru, ಏಪ್ರಿಲ್ 21 -- ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ ಇದೀಗ ದೂರ ತೀರ ಯಾನ ಸಿನಿಮಾ ಕೆಲಸಗಳಲ್ಲಿ ಬಿಜಿಯಾಗಿದ್ದಾರೆ. ಇನ್ನೇನು ಬಿಡುಗಡೆಗೆ ಅಣಿಯಾಗಿರುವ ಈ ಸಿನಿಮಾದಿಂದ ಮೊದಲ ಹಾಡು ಬಿಡುಗಡೆ ಆಗಿದೆ. ಕವಿರಾಜ್ ಬರೆದಿರುವ ಸಾಹಿತ್ಯಕ್ಕೆ, ಬಕ್ಕೇಶ್- ಕಾರ್ತಿಕ್ ಸ್ವರ ಸಂಯೋಜನೆ ಮಾಡಿದ್ದು, ಖ್ಯಾತ ಗಾಯಕರಾದ ಅರ್ಮಾನ್ ಮಲಿಕ್ ಹಾಡಿದ್ದಾರೆ.

ಮಂಸೋರೆ ಬರೆದಿರುವ ಕಥೆಗೆ ಚೇತನಾ ತೀರ್ಥಹಳ್ಳಿ ಸಂಭಾಷಣೆ ಬರೆದಿದ್ದಾರೆ. ಈ ಸಿನೆಮಾದಲ್ಲಿ ಒಟ್ಟು ಆರು ಹಾಡುಗಳಿದ್ದು, ಬಕ್ಕೇಶ್ ಹಾಗೂ ಕಾರ್ತೀಕ್ ಹಾಡುಗಳನ್ನು ಸಂಯೋಜಿಸಿದ್ದಾರೆ. ಜಯಂತ್ ಕಾಯ್ಕಿಣಿ, ಕವಿರಾಜ್, ಪ್ರಮೋದ್ ಮರವಂತೆ ಹಾಗೂ ಕಿರಣ್ ಕಾವೇರಪ್ಪ ಹಾಡುಗಳನ್ನು ಬರೆದಿದ್ದಾರೆ.

ಸಿನೆಮಾದ ಶೀರ್ಷಿಕೆ ಗೀತೆಯನ್ನು ಮುಂದಿನ ತಿಂಗಳು ಬಿಡುಗಡೆ ಮಾಡುವುದಾಗಿ ತಿಳಿಸಿರುವ ನಿರ್ದೇಶಕ ಮಂಸೋರೆಯವರು, ಆ ಹಾಡನ್ನು ವಿಶೇಷವಾಗಿ ಪ್ರೇಕ್ಷಕರಿಂದಲೇ ಬಿಡುಗಡೆ ಮಾಡಿಸುವ ಆಲೋಚನೆ ಇದ್ದು, ರಾಜ್ಯದ ಪ್ರಮುಖ ನಗರವೊಂದರಲ್ಲಿ ಬಿಡುಗಡೆ ಮಾಡಲು ಯೋಜನೆ ರೂಪಿಸಿರುವುದಾಗಿ ತಿಳಿಸ...