Bengaluru, ಏಪ್ರಿಲ್ 17 -- ನಟನೆ, ನಿರ್ಮಾಣ, ನಿರ್ದೇಶನ, ರಂಗಭೂಮಿ ಹೀಗೆ ಹಲವು ವಿಭಾಗಗಳಲ್ಲಿ ಗುರುತಿಸಿಕೊಂಡಿರುವ ಬಿ ಸುರೇಶ ಮತ್ತು ನಟಿ, ನಿರ್ಮಾಪಕಿ ಶೈಲಜಾ ನಾಗ್ ಅವರ ಪುತ್ರಿ ಚಂದನಾ ಎಸ್ ನಾಗ್ ಈಗ ಭರತನಾಟ್ಯ ರಂಗಪ್ರವೇಶ ಮಾಡಲಿದ್ದಾರೆ. ಸ್ನೇಹಾ ಕಪ್ಪಣ್ಣ ಅವರ ಭ್ರಮರಿ ನಾಟ್ಯಶಾಲೆಯಲ್ಲಿ ಕಲಿಯುತ್ತಿರುವ ಚಂದನಾ ಎಸ್. ನಾಗ್‌, ಇದೇ ಏಪ್ರಿಲ್‌ 20ರಂದು ಬೆಂಗಳೂರಿನ ಜೆಸಿ ರಸ್ತೆಯಲ್ಲಿನ ADA ರಂಗಮಂದಿರದಲ್ಲಿ, ಸಂಜೆ 5:30ಕ್ಕೆ ರಂಗಪ್ರವೇಶ ಮಾಡಲಿದ್ದಾರೆ.

ಈ ವಿಶೇಷ ಕಾರ್ಯಕ್ರಮಕ್ಕೆ ನೂಪುರ ಸ್ಕೂಲ್‌ ಆಫ್‌ ಭರತನಾಟ್ಯಂನ ನಿರ್ದೇಶಕಿ ಗುರು ಡಾ. ಲಲಿತಾ ಶ್ರೀನಿವಾಸನ್‌, ಪದ್ಮಶ್ರೀ ಶ್ರೀಮತಿ ಪ್ರತಿಭಾ ಪ್ರಹ್ಲಾದ್‌, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷೆ ಗುರು ಶ್ರೀಮತಿ ಶುಭಾ ಧನಂಜಯ್‌ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನಟಿಯಾಗಿ, ಬರಹಗಾರ್ತಿಯಾಗಿ, ನೃತ್ಯಗಾರ್ತಿಯಾಗಿ ನಿರ್ದೇಶಕಿಯಾಗಿಯೂ ಗುರುತಿಸಿಕೊಂಡಿರುವ ಚಂದನಾ, ಬೆಂಗಳೂರಿನ ಸೆಂಟ್‌ ಜೋಸೆಫ್‌ ಕಾಲೇಜಿನಲ್ಲಿ ವಿಷುಯಲ್‌ ಕಮ್ಯೂನಿಕೇಷನ್‌ ವಿಷಯದಲ್ಲ...