ಭಾರತ, ಮೇ 11 -- ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ಇರುವುದರಿಂದ, ಪ್ರಸ್ತುತ ಸನ್ನಿವೇಶವು ಬಿಸಿಸಿಐ ಮತ್ತು ಭಾರತೀಯ ಕ್ರಿಕೆಟ್ಗೂ ಕಠಿಣವಾಗಿದೆ. ಐಪಿಎಲ್ ಪಂದ್ಯಗಳನ್ನು ಮುಂದೂಡಿದ್ದು ಒಂದೆಡೆಯಾದರೆ, ಭಾರತೀಯ ಕ್ರಿಕೆಟ್ನ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾಗುವ ಇಚ್ಛೆ ವ್ಯಕ್ತಪಡಿಸಿರುವುದು ಮತ್ತೊಂದು ಕಡೆ. ಟೆಸ್ಟ್ ಕ್ರಿಕೆಟ್ನಿಂದ ಹಿಂದೆ ಸರಿಯುವ ಕುರಿತು ಅವರು ಬಿಸಿಸಿಐಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಇದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ವಿರಾಟ್ ಕೊಹ್ಲಿಗೆ ಬಿಸಿಸಿಐ ಒತ್ತಾಯಿಸಿದ್ದು, ಮತ್ತೆ ಟೆಸ್ಟ್ ಕ್ರಿಕೆಟ್ ಆಡುವುದನ್ನು ಮುಂದುವರೆಸಲು ಹೇಳುವ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂದು ವಿವಿಧ ಮಾಧ್ಯಮ ವರದಿಗಳು ತಿಳಿಸಿವೆ. ಇದು ಅಭಿಮಾನಿಗಳಿಗೆ ತುಸು ಸಮಾಧಾನ ಮೂಡಿಸಿತ್ತು.
ಭಾರತ ಕ್ರಿಕೆಟ್ ತಂಡವು ಜೂನ್ 20ರಿಂದ ಹೆಡಿಂಗ್ಲೆಯಲ್ಲಿ ಆರಂಭವಾಗುವ ಐದು ಪಂದ್ಯ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.