Mangalore, ಫೆಬ್ರವರಿ 26 -- ಮಂಗಳೂರು: ಕರ್ನಾಟಕ ರಾಜ್ಯದಲ್ಲಿ 2022 ರ ಜುಲೈ 1 ರಿಂದ-2024 ರ ಜುಲೈ 31ರ ಅವಧಿಯಲ್ಲಿ ನಿವೃತ್ತರಾದ ಸರಕಾರಿ ಅಧಿಕಾರಿ/ನೌಕರ ವರ್ಗದ 26,700 ನಿವೃತ್ತರಿಗೆ 7 ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನಿವೃತ್ತಿ ಆರ್ಥಿಕ ಸೌಲಭ್ಯ ನೀಡಲು ಮುಖ್ಯಮಂತ್ರಿಗಳಿಗೆ ಆಗ್ರಹಿಸಿ ಫೆಬ್ರವರಿ 28 ರಿಂದ ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಬೃಹತ್ ಪ್ರತಿಭಟನೆ, ಹೋರಾಟ ನಡೆಸಲು ನಿರ್ಧರಿಸಲಾಗಿದೆ.ಮುಖ್ಯಮಂತ್ರಿಗಳು 10 ದಿನಗಳ ಒಳಗಡೆ ನಮ್ಮ ಬೇಡಿಕೆ ಈಡೇರಿಕೆ ಕುರಿತು ಚರ್ಚೆಗೆ ಆಹ್ವಾನಿಸದಿದ್ದಲ್ಲಿ ಹೋರಾಟಗಾರರಾದ ಅಣ್ಣಾ ಹಜಾರೆ ಮತ್ತು ಡಾ.ಸಂತೋಷ ಹೆಗಡೆ ಅವರುಗಳ ನೇತೃತ್ವದಲ್ಲಿ ಬೆಂಗಳೂರು ಚಲೋ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ, ಹೋರಾಟವನ್ನು ಅನಿರ್ಧಿಷ್ಟ ಅವಧಿಗೆ ನಡೆಸಲು ನಿಶ್ಚಯಿಸಿಲಾಗಿದೆ.

ಸರಕಾರವು ಸರಕಾರಿ ನೌಕರರಿಗೆ ವೇತನ ಭತ್ಯೆಗಳನ್ನು ಪರಿಷ್ಕರಿಸಲು ಹಾಗೂ ಪಿಂಚಣಿದಾರರ ಪಿಂಚಣಿಯನ್ನು ಪರಿಷ್ಕರಿಸಲು ಡಾ.ಸುಧಾಕರರಾವ್ ಅವರ ನೇತೃತ್ವದಲ್ಲಿ 7 ನೇ ವೇತನ ಆಯೋಗವನ್ನು ರಚಿಸಿತ್ತು. ಇದರ ಆಧಾರದಲ್ಲಿ 202...