Bengaluru, ಮೇ 29 -- ಬೆಂಗಳೂರು: ನಿಷೇಧಿತ ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ ನೈಜೀರಿಯಾದ ಪ್ರಜೆ ಪೆಪೆ ಎಂಬಾತನನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈತನಿಂದ ರೂ. 3 ಕೋಟಿ ಮೌಲ್ಯದ ಮೂರು ಕೆ.ಜಿ ಎಂಡಿಎಂಎ ಕ್ರಿಸ್ಟಲ್ ಜಪ್ತಿ ಮಾಡಲಾಗಿದೆ. ದಾಸರಹಳ್ಳಿಯ ನಾರ್ಥ್ ಹಿಲ್ಸ್ ಶಾಲೆ ಹಿಂಭಾಗದ ಖಾಲಿ ಪ್ರದೇಶದಲ್ಲಿ ವಿದೇಶಿ ಪ್ರಜೆಯೊಬ್ಬ ಡ್ರಗ್ಸ್ ಮಾರಾಟ ಮಾಡುತ್ತಿರುವ ಖಚಿತ ಸುಳಿವು ಸಿಕ್ಕಿತ್ತು. ಮಾಹಿತಿ ಆಧರಿಸಿ ದಾಳಿ ಮಾಡಿದಾಗ ಈತನ ಬಳಿ ಡ್ರಗ್ಸ್ ಪತ್ತೆಯಾಗಿದೆ. ಆರೋಪಿ ವಿರುದ್ಧ ಮಾದಕ ದ್ರವ್ಯ ನಿಗ್ರಹ ಕಾಯ್ದೆ ಅಡಿ (ಎನ್ ಡಿಪಿಎಸ್) ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
2023ರಲ್ಲಿ ಪೆಪೆ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದ. ಕೈತುಂಬ ಸಂಬಳ ನೀಡುವ ಕೆಲಸ ದೊರೆಯದ ಕಾರಣಕ್ಕೆ ಕಡಿಮೆ ಅವಧಿಯಲ್ಲಿ ಹೆಚ್ಚಿನ ಹಣ ಸಂಪಾದನೆ ಮಾಡುವ ದುರಾಸೆಯಿಂದ ಡ್ರಗ್ಸ್ ಮಾರಾಟ ಮಾಡುವ ಕೆಲಸಕ್ಕೆ ಕೈಹಾಕಿದ್ದ. ಬಾಣಸವಾಡಿಯ ಕಮ್ಮನಹಳ...
Click here to read full article from source
To read the full article or to get the complete feed from this publication, please
Contact Us.