ಬೆಂಗಳೂರು, ಜೂನ್ 5 -- ಕಳೆದ ತಿಂಗಳು ನಡೆಯಬೇಕಿದ್ದ ನೀರಜ್ ಚೋಪ್ರಾ ಕ್ಲಾಸಿಕ್ ಅಂತಾರಾಷ್ಟ್ರೀಯ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಇದೀಗ ಜುಲೈ 5ರಂದು ಮರುನಿಗದಿಪಡಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವಿನ ಉದ್ವಿಗ್ನತೆಯಿಂದಾಗಿ ಕ್ರೀಡಾ ಈವೆಂಟ್‌ ಅನ್ನು ಮುಂದೂಡಲಾಗಿತ್ತು. ಈ ಕಾರ್ಯಕ್ರಮವನ್ನು ಮುಂದಿನ ತಿಂಗಳ ಆರಂಭದಲ್ಲಿ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಸುವುದಾಗಿ ಸಂಘಟಕರು ತಿಳಿಸಿದ್ದಾರೆ.

ಮೇ 24ರಂದು ನಿಗದಿಯಾಗಿದ್ದ ಭಾರತದ ಮೊದಲ ಅಂತಾರಾಷ್ಟ್ರೀಯ ಜಾವೆಲಿನ್ ಥ್ರೋ ಸ್ಪರ್ಧೆಯನ್ನು ಜೆಎಸ್‌ಡಬ್ಲ್ಯು ಸ್ಪೋರ್ಟ್ಸ್ ಸಹಯೋಗದೊಂದಿಗೆ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಆಯೋಜಿಸುತ್ತಿದ್ದಾರೆ.‌ ಇವರಿಗೆ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್ಐ) ಕಾರ್ಯಕ್ರಮ ನಡೆಸಲು ಅನುಮತಿ ನೀಡಿದೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ 12 ಕ್ರೀಡಾಪಟುಗಳು ಭಾಗಿಯಾಗುವ ಈ ಪಂದ್ಯಾವಳಿಯಲ್ಲಿ, ವಿಶ್ವದ ಏಳು ಅತ್ಯುತ್ತಮ ಜಾವೆಲಿನ್ ಎಸೆತಗಾರರು ಭಾಗವಹಿಸುತ್ತಿರುವುದು ವಿಶೇಷ. ಅಲ್ಲದೆ...