ಭಾರತ, ಮಾರ್ಚ್ 15 -- Bengaluru Water Tariff Hike: ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ತೀರ್ಮಾನ ಆಗಿದೆ ಎಂದು ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿಧಾನ ಪರಿಷತ್‌ನಲ್ಲಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ 2014ರ ನಂತರ ನೀರಿನ ದರ ಪರಿಷ್ಕರಣೆಯೇ ಆಗಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿಯು 7-8 ಪೈಸೆ ದರ ಏರಿಕೆ ಮಾಡಬೇಕು ಎಂದು ಪ್ರಸ್ತಾವನೆ ನೀಡಿದೆ. ಆದರೆ, ಅಷ್ಟು ಏರಿಕೆ ಬೇಡ. ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡುವ ಚಿಂತನೆಯಿದೆ. ಶೀಘ್ರ ನಗರದ ಶಾಸಕರ ಬಳಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನ ಪರಿಷತ್‌ ಕಲಾಪದಲ್ಲಿ ಶುಕ್ರವಾರ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ರಾಮೋಜಿ ಗೌಡ ಅವರು, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗ ದಲ್ಲಿ ಕುಡಿಯುವ ನೀರಿನ ಅಭಾವದಿಂದ ಖಾಸಗಿ ಟ್ಯಾಂಕರ್‌ಗಳು ದುಪ್ಪಟ್ಟು ಹಣದ ಬೇಡಿಕೆ ಇಡುತ್ತಿವೆ. ಆದ್ದರಿಂದ ಜನರಿಗೆ ಉಚಿತವಾಗಿ ನೀರು ಪೂರೈಸಬೇಕು ಹಾಗೂ ಕಾವೇರಿ...