ಭಾರತ, ಮಾರ್ಚ್ 14 -- ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್​ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಡೆಲ್ಲಿ ಕ್ಯಾಪಿಟಲ್ಸ್ ನೂತನ ನಾಯಕನನ್ನು ಘೋಷಿಸಿದೆ. ಪ್ರಸ್ತುತ ಲಕ್ನೋ ಸೂಪರ್​ ಜೈಂಟ್ಸ್ ನಾಯಕನಾಗಿರುವ ರಿಷಭ್ ಪಂತ್ ಅವರಿಂದ ತೆರವಾದ ಸ್ಥಾನಕ್ಕೆ ಎಡಗೈ ಆಲ್​ರೌಂಡರ್ ಅಕ್ಷರ್ ಪಟೇಲ್ ಅವರನ್ನು ನಾಯಕನನ್ನಾಗಿ ನೇಮಿಸಿದೆ. ಇದೇ ಮೊದಲ ಬಾರಿಗೆ ಐಪಿಎಲ್ ನಾಯಕತ್ವ ಪಡೆದ ಅಕ್ಷರ್, ಡೆಲ್ಲಿಗೆ ಚೊಚ್ಚಲ ಪ್ರಶಸ್ತಿ ಗೆದ್ದುಕೊಡುವ ವಿಶ್ವಾಸದಲ್ಲಿದ್ದಾರೆ.

ತಂಡದ ನಾಯಕನಾಗಿ ಅಕ್ಷರ್ ಪಟೇಲ್ ಆಯ್ಕೆಯಾಗಿರುವ ಕುರಿತು ಡೆಲ್ಲಿ ಕ್ಯಾಪಿಟಲ್ಸ್ ತನ್ನ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ವಿಶೇಷ ವಿಡಿಯೋವನ್ನು ಬಿಡುಗಡೆ ಮಾಡಿ ಈ ಬಗ್ಗೆ ಮಾಹಿತಿ ನೀಡಿದೆ. ಡೆಲ್ಲಿ ತಂಡದ ನಾಯಕತ್ವಕ್ಕಾಗಿ ಅಕ್ಷರ್ ಅವರೊಂದಿಗೆ ಕೆಎಲ್ ರಾಹುಲ್ ಕೂಡ ಸ್ಪರ್ಧೆಯಲ್ಲಿದ್ದರು. ಕೆಎಲ್​ಗೆ ನಾಯಕತ್ವ ನೀಡಲಾಗುವುದು ಎಂದು ಎಲ್ಲರೂ ಭಾವಿಸಿದ್ದರು. ಆದರೆ ರಾಹುಲ್ ಫ್ರಾಂಚೈಸಿ ಆಫರ್​ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಟೀಮ್ ಮ್ಯಾನೇಜ್​ಮೆಂಟ್ ಅಕ್ಷ...