ಭಾರತ, ಮೇ 11 -- Entha Kathe Maaraya: ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ತನ್ನ ರಾಕ್ಷಸ ಹೆಜ್ಜೆಗಳನ್ನು ಮುಂದುವರೆಸಿರುವ ಈ ಹೊತ್ತಿನಲ್ಲಿ ಪ್ರಸಕ್ತ ಪ್ರಾಕೃತಿಕ ವಿದ್ಯಮಾನಗಳ ಸುತ್ತ ಹೆಣೆದಿರುವ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ "ಎಂಥಾ ಕಥೆ ಮಾರಾಯ" ಚಿತ್ರ ನೇರವಾಗಿ ಒಟಿಟಿ ಅಂಗಳದಲ್ಲಿ ಬಿಡುಗಡೆಯಾಗಿದೆ. ಏರ್ಟೆಲ್ ಎಕ್ಸ್ಟ್ರೀಮ್, ಹಂಗಾಮ ಪ್ಲೇ, ಓಟಿಟಿ ಪ್ಲೇ ಮುಂತಾದ ಒಟಿಟಿಗಳಲ್ಲಿ ಪ್ರಸಾರವಾಗಿ ವೀಕ್ಷಕರ ಗಮನ ಸೆಳೆದಿದೆ. ಚೆನ್ನೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಈ ಚಿತ್ರ ಬೆಂಗಳೂರಿನ ಪ್ರಸಕ್ತ ನೀರಿನ ಸಮಸ್ಯೆ ಮತ್ತು ಜಾಗತಿಕ ತಾಪಮಾನದ ಬಗ್ಗೆ ಬೆಳಕು ಚೆಲ್ಲಿದೆ.

ಶರಾವತಿ ನದಿಯಿಂದ ಬೆಂಗಳೂರಿಗೆ ಕುಡಿಯುವ ನೀರು ತರಿಸುವ ವಿಚಾರದ ಸುತ್ತಲೂ ಚಿತ್ರದ ಕಥೆ ಸಾಗುತ್ತದೆ. ಶರಾವತಿ ನದಿಯ ಸಂತ್ರಸ್ತರ ಬದುಕಲ್ಲಿ ಲಿಂಗನಮಕ್ಕಿ ಡ್ಯಾಂ ನಿರ್ಮಾಣದಿಂದ ಹಿಡಿದು ಇಲ್ಲಿಯವರೆಗಿನ ಆಗುಹೋಗುಗಳು ಚಿತ್ರದಲ್ಲಿ ಅಡಕವಾಗಿವೆ. ಒಂದು ನದಿ, ಒಂದು ಕುಟುಂಬ ಹಾಗೂ ಹಲವು ಯೋಜ...