Bengaluru, ಜನವರಿ 31 -- Theatrical Releases This Week: ಶುಭ ಶುಕ್ರವಾರ ಬಂದೇ ಬಿಡ್ತು. ಇಂದು (ಜ. 31) ಚಿತ್ರಮಂದಿರಗಳಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 9 ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಬಹುತೇಕ ಹೊಸಬರ ಸಿನಿಮಾಗಳು ಈ ವಾರ ತೆರೆಗೆ ಬರುತ್ತಿವೆ. ಕೆಲ ವರ್ಷಗಳ ಹಿಂದೆ ನಿರ್ಮಾಣ ಆಗಿದ್ದ ಮತ್ತು ತಡವಾಗಿ ಚಿತ್ರಮಂದಿರಗಳಿಗೆ ಎಂಟ್ರಿ ಪಡೆದ ಹಲವು ಸಿನಿಮಾಗಳು ಈ ಲಿಸ್ಟ್‌ನಲ್ಲಿವೆ. ಹಾಗಾದರೆ, ಇಂದು ತೆರೆಕಾಣುತ್ತಿರುವ ಸಿನಿಮಾಗಳು ಯಾವವು? ಇಲ್ಲಿದೆ ಮಾಹಿತಿ.

ಗಣ: ಹೈದರಾಬಾದ್ ಮೂಲದ ಪಾರ್ಥು ಎಂಬುವವರು ತಮ್ಮ ಚೆರಿ ಕ್ರಿಯೇಷನ್ಸ್ ಬ್ಯಾನರ್‌ ಮೂಲಕ ಗಣ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಪ್ರಜ್ವಲ್‌ ದೇವರಾಜ್‌ ನಾಯಕನಾಗಿ ನಟಿಸಿರುವ ಈ ಸಿನಿಮಾವನ್ನು ಹರಿಪ್ರಸಾದ್‌ ಜಕ್ಕ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಯಶಾ ಶಿವಕುಮಾರ್, ವೇದಿಕಾ ಕುಮಾರ್, ಕೃಷಿ ತಾಪಂಡ, ವಿಶಾಲ್ ಹೆಗಡೆ, ರವಿ ಕಾಳೆ, ಸಂಪತ್ ರಾಜ್, ಶಿವರಾಜ್ ಕೆ.ಆರ್ ಪೇಟೆ, ರಮೇಶ್ ಭಟ್ ಮುಂತಾದವರು ನಟಿಸಿದ್ದಾರೆ.

ಇದನ್ನೂ ಓದಿ: ಬಿಡುಗಡೆಯಾಗುತ್ತಿದೆ 'ದೇ...