ಭಾರತ, ಏಪ್ರಿಲ್ 16 -- ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಬಿಆರ್ ಗವಾಯಿ ನಿಯೋಜಿತರಾಗಿದ್ದಾರೆ. ಸಿಜೆಐ ಸಂಜೀವ್ ಖನ್ನಾ ಅವರು ಮುಂದಿನ ತಿಂಗಳ 13 ರಂದು ನಿವೃತ್ತರಾಗುತ್ತಿದ್ದು, ನ್ಯಾಯಮೂರ್ತಿ ಬಿಆರ್ ಗವಾಯಿ (ಭೂಷಣ್ ರಾಮಕೃಷ್ಣ ಗವಾಯಿ) ಅವರ ಹೆಸರನ್ನು ಸಿಜೆಐ ಸ್ಥಾನಕ್ಕೆ ಶಿಫಾರಸು ಮಾಡಿದ್ದಾರೆ. ಕಾನೂನು ಸಚಿವಾಲಯಕ್ಕೆ ಈ ಕುರಿತ ಪ್ರಸ್ತಾವನೆ ಕಳುಹಿಸಿದ್ದು, ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ಭಾರತದ 52ನೇ ಸಿಜೆಐ ಆಗುವುದು ಖಚಿತವಾಗಿದೆ. ಸಿಜೆಐ ಸಂಜೀವ್ ಖನ್ನಾ ಅವರು ಮೇ 13 ರಂದು ನಿವೃತ್ತರಾಗಲಿದ್ದಾರೆ. ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ಮೇ 14 ರಂದು ಸಿಜೆಐ ಆಗಿ ಪ್ರಮಾಣ ಸ್ವೀಕರಿಸಲಿದ್ದಾರೆ.

ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ಭಾರತದ ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಯಾಗಿ ಆರು ತಿಂಗಳ ಕಾಲ ಕರ್ತವ್ಯ ನಿರ್ವಹಿಸಲಿದ್ದಾರೆ. ಅವರ ಅಧಿಕಾರಾವಧಿ 2025ರ ನವೆಂಬರ್‌ಗೆ ಕೊನೆಗೊಳ್ಳಲಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಅವರು ದಲಿತ ಸಮುದಾಯ...