ಭಾರತ, ಮಾರ್ಚ್ 8 -- 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಅದ್ಧೂರಿ ತೆರೆ ಬೀಳಲು ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿದೆ. ಮಾರ್ಚ್ 9ರ ಭಾನುವಾರ ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತ - ನ್ಯೂಜಿಲೆಂಡ್ ತಂಡಗಳ ನಡುವೆ ಪ್ರಶಸ್ತಿಗಾಗಿ ಜಿದ್ದಾಜಿದ್ದಿನ ಪೈಪೋಟಿ ನಡೆಯಲಿದೆ. ಅದಕ್ಕೂ ಮುನ್ನ ಭಾರತ ತಂಡದ ಪ್ಲೇಯಿಂಗ್​​ 11ನಲ್ಲಿ ಅನಿರೀಕ್ಷಿತ ಬದಲಾವಣೆಯಾಗುವ ಕುರಿತು ಮಾಜಿ ಮುಖ್ಯ ಕೋಚ್ ರವಿ ಶಾಸ್ತ್ರಿ ಸುಳಿವು ನೀಡಿದ್ದಾರೆ. ಯಾರು ಸೇರ್ಪಡೆಯಾಗುತ್ತಾರೆ ಎನ್ನುವುದರ ಬಗ್ಗೆ ಆಳವಾದ ವಿವರ ನೀಡದಿದ್ದರೂ ಬದಲಾವಣೆಗೆ ಸಂಬಂಧಿಸಿ ಕಾರಣ ಬಹಿರಂಗಪಡಿಸಿದ್ದಾರೆ.

ಪ್ಲೇಯಿಂಗ್ 11 ನಿರ್ಧರಿಸುವಲ್ಲಿ ಪಿಚ್ ಪರಿಸ್ಥಿತಿಗಳು ನಿರ್ಣಾಯಕ ಪಾತ್ರ ವಹಿಸುತ್ತವೆ ಎಂದು ಅವರು ನಂಬಿದ್ದಾರೆ. ಲೀಗ್​ನ ಕೊನೆಯ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಿದ ತಂಡವೇ ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್​ನಲ್ಲೂ ಕಣಕ್ಕಿಳಿದಿತ್ತು. ಈಗ ಫೈನಲ್ ಪಂದ್ಯವು ಭಾರತ ಮತ್ತು ಪಾಕಿಸ್ತಾನ ಆಡಿದ್ದ ಪಿಚ್​ನಲ್ಲೇ ನಡೆಯಲಿದೆ. ವರುಣ್ ಚಕ್ರವರ್ತಿ ಕಣಕ್...