ಭಾರತ, ಫೆಬ್ರವರಿ 18 -- Karnataka Panchayat Polls : ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವುದಕ್ಕೆ ನಾವು ಸಿದ್ಧರಿದ್ದೇವೆ ಎಂದು ಕರ್ನಾಟಕ ಸರ್ಕಾರವು ಸೋಮವಾರ (ಫೆ 17) ಕರ್ನಾಟಕ ಹೈಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ. ಮೇ ತಿಂಗಳಲ್ಲಿ ಕ್ಷೇತ್ರಗಳ ಮೀಸಲಾತಿ ಪ್ರಕಟಿಸಿ, ಜೂನ್ - ಜುಲೈನಲ್ಲಿ ಸಾಧ್ಯವಾದಷ್ಟೂ ಆಗಸ್ಟ್ ಒಳಗೆಯೇ ಚುನಾವಣೆ ನಡೆಸುವುದಾಗಿ ಕೋರ್ಟ್‌ಗೆ ಕರ್ನಾಟಕ ಸರ್ಕಾರ ಹೇಳಿದೆ.

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಗೊಳಿಸಿ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಭರವಸೆ ನೀಡಿದೆ. ಪಂಚಾಯಿತಿ ಚುನಾವಣೆ ಸಂಬಂಧ ದಾಖಲಾಗಿದ್ದ ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ಆಗ ಸರ್ಕಾರ ಈ ಅಫಿಡವಿಟ್ ಸಲ್ಲಿಸಿದೆ.

1) ಸರ್ಕಾರದ ಪರ ವಾದ: ಎರಡು ಪ್ರತ್ಯೇಕ ನ್ಯಾಯಾಂಗ ನಿಂದನೆ ಅ...