ಭಾರತ, ಏಪ್ರಿಲ್ 19 -- ಐಪಿಎಲ್‌ 18ನೇ ಆವೃತ್ತಿಯಲ್ಲಿ ಈ ವಾರದ ಎರಡನೇ ಡಬಲ್ ಹೆಡರ್ ನಡೆಯುತ್ತಿದೆ. ಭಾನುವಾರ (ಏಪ್ರಿಲ್‌ 20) ನಡೆಯಲಿರುವ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮತ್ತೊಮ್ಮೆ ಎದುರಿಸಲಿದೆ. ಉಭಯ ತಂಡಗಳು ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಎದುರಾಗಿದ್ದವು. ಇದೀಗ ಒಂದು ದಿನದ ಪ್ರಯಾಣ ಬ್ರೇಕ್‌ ನಂತರ ಮತ್ತೊಮ್ಮೆ ಮುಖಾಮುಖಿಯಾಗಲಿವೆ. ದಿನದ ಎರಡನೇ ಪಂದ್ಯದಲ್ಲಿ ತಲಾ ಐದು ಬಾರಿ ಐಪಿಎಲ್‌ ಟ್ರೋಫಿ ಗೆದ್ದಿರುವ ಎರಡು ತಂಡಗಳಾದ ಮುಂಬೈ ಇಂಡಿಯನ್ಸ್‌ ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ತಂಡಗಳು ಎದುರಾಗುತ್ತಿವೆ. ಹೀಗಾಗಿ ಭಾನುವಾರ ದಿನವಿಡೀ ರೋಚಕ ಪಂದ್ಯ ನಡೆಯುವ ನಿರೀಕ್ಷೆ ಇದೆ.

ದಿನದ ಎರಡು ಮಹತ್ವದ ಪಂದ್ಯಗಳಿಗೆ ಸಂಬಂಧಿಸಿದಂತೆ ಪಿಚ್‌, ಹವಾಮಾನ ವರದಿ ಹಾಗೂ ಸಂಭಾವ್ಯ ತಂಡಗಳ ಮಾಹಿತಿ ಇಲ್ಲಿದೆ.

ಪಿಬಿಕೆಎಸ್‌ ತವರು ಮೈದಾನ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಬ್ಯಾಟರ್‌ಗಳಿಗೆ ಅನುಕೂಲಕರವಾಗಿದೆ. ಆದರೆ, ...