ಭಾರತ, ಮೇ 24 -- ಐಪಿಎಲ್‌ 2025ರ ಅಂಕಪಟ್ಟಿಯಲ್ಲಿ ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಪಂಜಾಬ್‌ ಕಿಂಗ್ಸ್‌ ತಂಡದ ಕನಸಿಗೆ ಸದ್ಯ ಡೆಲ್ಲಿ ಕ್ಯಾಪಿಟಲ್ಸ್‌ ಅಡ್ಡಿಯಾಗಿದೆ. ಪ್ರಸಕ್ತ ಆವೃತ್ತಿಯಲ್ಲಿ ಕೊನೆಯ ಪಂದ್ಯ ಆಡಿದ ಡಿಸಿ, ಗೆಲುವಿನೊಂದಿಗೆ ತನ್ನ ಅಭಿಯಾನ ಮುಗಿಸಿದೆ. ಅತ್ತ‌, ಈಗಾಗಲೇ ಪ್ಲೇಆಫ್ ಪ್ರವೇಶಿಸಿರುವ ಪಂಜಾಬ್‌, ಈ ಪಂದ್ಯ ಗೆದ್ದರೆ ಅಗ್ರ ಎರಡು ಸ್ಥಾನದೊಳಗೆ ಪ್ರವೇಶಿಸುವ ಸಾಧ್ಯತೆ ಇತ್ತು. ಆದರೆ, ಈ ಸೋಲಿನಿಂದಾಗಿ ಇದು ಸಾಧ್ಯವಾಗಿಲ್ಲ. ಸದ್ಯ ಅಗ್ರ ನಾಲ್ಕು ಸ್ಥಾನ ಪಡೆದ ತಂಡಗಳು ಇನ್ನೂ ತಲಾ ಒಂದು ಪಂದ್ಯಗಳಲ್ಲಿ ಆಡಲಿವೆ. ಆ ಬಳಿಕವಷ್ಟೇ ಅಗ್ರ ಎರಡು ತಂಡಗಳು ನಿರ್ಧಾರವಾಗಬೇಕಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಪಂಜಾಬ್‌, 206 ರನ್‌ ಗಳಿಸಿತು. ಬೃಹತ್‌ ಮೊತ್ತವನ್ನು ಚೇಸ್‌ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು 19.3 ಓವರ್‌ಗಳಲ್ಲಿ ಗುರಿ ತಲುಪಿತು. ಇದರೊಂದಿಗೆ 6 ವಿಕೆಟ್‌ಗಳಿಂದ ಗೆದ್ದು ಬೀಗಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್‌ ಆರ್ಯ ಕೇವಲ 6 ರ...