ಭಾರತ, ಏಪ್ರಿಲ್ 5 -- ಐಪಿಎಲ್‌ 2025ರ ಆವೃತ್ತಿಯಲ್ಲಿ ಪಂಜಾಬ್‌ ಕಿಂಗ್ಸ್‌ ತಂಡವು ತವರಿನಲ್ಲಿ ಆಡಿದ ಮೊದಲ ಪಂದ್ಯದಲ್ಲೇ ಸೋಲು ಕಂಡಿದೆ. ಟೂರ್ನಿಯ ಆರಂಭಿಕ ಎರಡೂ ಪಂದ್ಯಗಳಲ್ಲಿ ಸತತ ಗೆಲುವು ಸಾಧಿಸಿ ಬೀಗುತ್ತಿದ್ದ ಶ್ರೇಯಸ್‌ ಅಯ್ಯರ್‌‌ ಪಡೆ, ತವರಿನ ಅಭಿಮಾನಿಗಳಿಗೆ ನಿರಾಶೆ ಮೂಡಿಸಿದೆ. ಅತ್ತ ಟೂರ್ನಿಯಲ್ಲಿ ಸತತ ಎರಡು ಸೋಲು ಕಂಡಿದ್ದ ರಾಜಸ್ಥಾನ್‌ ರಾಯಲ್ಸ್, ಇದೀಗ ಸತತ ಎರಡನೇ ಗೆಲುವು ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಚಂಡೀಗಢದ ಮುಲ್ಲನ್ಪುರದಲ್ಲಿ ನಡೆದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಪಡೆ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಎರಡರಲ್ಲೂ ಆಲ್‌ರೌಂಡ್‌ ಪ್ರದರ್ಶನ ನೀಡಿ ಮಿಂಚಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್‌ ರಾಯಲ್ಸ್,‌ ಯಶಸ್ವಿ ಜೈಸ್ವಾಲ್‌ ಆಕರ್ಷಕ ಅರ್ಧಶತಕದ ನೆರವಿಂದ 4 ವಿಕೆಟ್‌ ನಷ್ಟಕ್ಕೆ 205 ರನ್‌ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್‌ ನಡೆಸಿದ ಪಂಜಾಬ್‌ 9 ವಿಕೆಟ್‌ ಕಳೆದುಕೊಂಡು 155 ರನ್‌ ಗಳಿಸಿತು. ಮ್ಯಾಕ್ಸ್‌ವೆಲ್‌ ಹಾಗೂ ನೆಹಾಲ್‌ ವಧೇರಾ ಆಕರ್ಷಕ ಜೊತೆಯಾಟದ ಹೊರತಾ...