ಭಾರತ, ಮಾರ್ಚ್ 26 -- ಬೆಂಗಳೂರು: ಪಕ್ಷದ ಆಂತರಿಕ ವಿಷಯಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿ ಚರ್ಚಿಸುವ ಮೂಲಕ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ ಎಂದು ಆರೋಪಿಸಿರುವ ಬಿಜೆಪಿ ಕೇಂದ್ರ ಶಿಸ್ತು ಸಮಿತಿ, ಶಾಸಕರಾದ ಶಿವರಾಮ ಹೆಬ್ಬಾರ್ ಮತ್ತು ಎಸ್.ಟಿ. ಸೋಮಶೇಖರ್, ಬಿ.ಪಿ ಹರೀಶ್ ಅವರಿಗೆ ನೋಟಿಸ್ ನೀಡಿದೆ. ಅಲ್ಲದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾದ ಮಾಜಿ ಸಚಿವರಾದ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮತ್ತು ಎಂ.ಪಿ.ರೇಣುಕಾಚಾರ್ಯ ಅವರಿಗೂ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ.
ಬಿಜೆಪಿ ಕೇಂದ್ರ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ನೋಟಿಸ್ ಜಾರಿ ಮಾಡಿದ್ದು, ಪಕ್ಷದ ನಿಯಮ ಉಲ್ಲಂಘಿಸಿರುವ ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಜರುಗಿಸಬಾರದು ಎಂಬುದನ್ನು ನೋಟಿಸ್ ತಲುಪಿದ 72 ಗಂಟೆಯೊಳಗೆ ಉತ್ತರಿಸಬೇಕು. ಕಾಲಮಿತಿಯೊಳಗೆ ಉತ್ತರಿಸದಿದ್ದಲ್ಲಿ, ಹೇಳಲು ಏನೂ ಇಲ್ಲವೆಂದು ಭಾವಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: H...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.