ಭಾರತ, ಮಾರ್ಚ್ 10 -- ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಮೂರು ಬಾರಿ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದ್ದು, ಇತಿಹಾಸ ಸೃಷ್ಟಿಸಿದೆ. ಫೈನಲ್‌ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತ ಐತಿಹಾಸಿಕ ಪ್ರಶಸ್ತಿಗೆ ಮುತ್ತಿಕ್ಕಿತು. ಸೋಲಿಲ್ಲದ ಸರದಾರನಾದ ಭಾರತ, ಫೈನಲ್​ನಲ್ಲಿ ನ್ಯೂಜಿಲೆಂಡ್, ಸೆಮಿಫೈನಲ್​ನಲ್ಲಿ ಆಸ್ಟ್ರೇಲಿಯಾ, ಲೀಗ್​ನಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ, ನ್ಯೂಜಿಲೆಂಡ್ ಅನ್ನು ಮಣಿಸಿತ್ತು.

12 ವರ್ಷಗಳ ನಂತರ ಅಂದರೆ 2013ರ ನಂತರ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಅಲ್ಲದೆ, 50 ಓವರ್​​​ಗಳ ಏಕದಿನ ಐಸಿಸಿ ಟೂರ್ನಿಗಳಲ್ಲಿ ಟ್ರೋಫಿ ಬರ ಕೊನೆಗೂ ನೀಗಿದೆ. 2015, 2019ರ ಏಕದಿನ ವಿಶ್ವಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2023ರ ಏಕದಿನ ವಿಶ್ವಕಪ್ ಫೈನಲ್​ನಲ್ಲಿ ಭಾರತ ಟ್ರೋಫಿ ಗೆಲ್ಲಲು ವಿಫಲವಾಗಿತ್ತು. ಇದೀಗ ಕೊನೆಗೂ ಟ್ರೋಫಿ ಗೆದ್ದು ಬೀಗಿದೆ.

ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಜರುಗಿದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್​ನಲ...