ಭಾರತ, ಮಾರ್ಚ್ 10 -- ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಮೂರು ಬಾರಿ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದ್ದು, ಇತಿಹಾಸ ಸೃಷ್ಟಿಸಿದೆ. ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಸೋಲಿಸಿದ ಭಾರತ ಐತಿಹಾಸಿಕ ಪ್ರಶಸ್ತಿಗೆ ಮುತ್ತಿಕ್ಕಿತು. ಸೋಲಿಲ್ಲದ ಸರದಾರನಾದ ಭಾರತ, ಫೈನಲ್ನಲ್ಲಿ ನ್ಯೂಜಿಲೆಂಡ್, ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ, ಲೀಗ್ನಲ್ಲಿ ಬಾಂಗ್ಲಾದೇಶ, ಪಾಕಿಸ್ತಾನ, ನ್ಯೂಜಿಲೆಂಡ್ ಅನ್ನು ಮಣಿಸಿತ್ತು.
12 ವರ್ಷಗಳ ನಂತರ ಅಂದರೆ 2013ರ ನಂತರ ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಅಲ್ಲದೆ, 50 ಓವರ್ಗಳ ಏಕದಿನ ಐಸಿಸಿ ಟೂರ್ನಿಗಳಲ್ಲಿ ಟ್ರೋಫಿ ಬರ ಕೊನೆಗೂ ನೀಗಿದೆ. 2015, 2019ರ ಏಕದಿನ ವಿಶ್ವಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2023ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಭಾರತ ಟ್ರೋಫಿ ಗೆಲ್ಲಲು ವಿಫಲವಾಗಿತ್ತು. ಇದೀಗ ಕೊನೆಗೂ ಟ್ರೋಫಿ ಗೆದ್ದು ಬೀಗಿದೆ.
ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಜರುಗಿದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ನಲ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.