Bengaluru, ಮೇ 23 -- ಬೆಂಗಳೂರು:ಕರ್ನಾಟಕದಲ್ಲಿ ಮೇ ತಿಂಗಳಿನಲ್ಲಿ ನಡೆದಿರುವ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಗಣತಿ ಕಾರ್ಯಕ್ರಮದ ಅವಧಿಯನ್ನು ಎರಡನೇ ಬಾರಿಗೆ ವಿಸ್ತರಣೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.ಮನೆ-ಮನೆ ಭೇಟಿ ನೀಡಿ ಸಮೀಕ್ಷೆಯು 2025ರ ಮೇ 26 ರಿಂದ ಮೇ 29 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) - 03 ದಿನಗಳ ಕಾಲ - ಮೇ 30, 31 ಹಾಗೂ 01 ನೇ ಜೂನ್ -2025 ರವರೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆ- ಜೂನ್ 01 ರವರೆಗೆ ಮುಂದುವರೆಯಲಿದೆ ಎಂದು ಏಕ ಸದಸ್ಯ ಆಯೋಗದ ಕಾರ್ಯದರ್ಶಿ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.