ಭಾರತ, ಮೇ 5 -- ಪರಿಶಿಷ್ಟ ಜಾತಿ ಒಳಮೀಸಲಾತಿ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ 2025 ಇಂದು (ಮೇ 5) ಶುರುವಾಗಿದ್ದು ಮೇ 21ರ ತನಕ ಮೂರು ಹಂತಗಳಲ್ಲಿ ನಡೆಯಲಿದೆ. ಈ ಸಮೀಕ್ಷೆ ನಡೆಸುವವರು ಪರಿಶಿಷ್ಟ ಜಾತಿಯವರ ಮನೆ-ಮನೆಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸುವುದಕ್ಕೆ ಅನುಕೂಲವಾಗುವಂತೆ ಸರ್ಕಾರ ಆ್ಯಂಡ್ರಾಯ್ಡ್‌ ಆ್ಯಪ್‌ ಅಭಿವೃದ್ಧಿಪಡಿಸಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್‌ ಎನ್‌ ನಾಗಮೋಹನದಾಸ್‌ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸು ಪ್ರಕಾರ, ಈ ಸಮೀಕ್ಷೆಯಲ್ಲಿ ಜಾತಿ ತಾರತಮ್ಯದ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಅದರ ಆಧಾರದ ಮೇಲೆ ಒಳಮೀಸಲು ಸೌಲಭ್ಯ ಕಲ್ಪಿಸುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ.

ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆಗೆ ಒಳಪಡುವವರು ಆಧಾರ್/ಪಡಿತರ ಚೀಟಿ ನೀಡಿ ನೋಂದಣಿ ಮಾಡಿಕೊಂಡ ನಂತರ ಅವರ ಮತ್ತು ಕುಟುಂಬದವರ ವೈಯಕ್ತಿಕ ವಿವರ ಒದಗಿಸಬೇಕಾಗುತ್ತದೆ. ಕುಟುಂಬದ ಸದಸ್ಯರ ವಿವರ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ಸರ್ಕಾರಿ ಸವಲತ್ತುಗಳು, ಮೂಲಸೌಕರ್ಯಗಳು ಸೇರಿ ...