ಭಾರತ, ಮೇ 5 -- ಪರಿಶಿಷ್ಟ ಜಾತಿ ಒಳಮೀಸಲಾತಿ: ಕರ್ನಾಟಕದಲ್ಲಿ ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆ 2025 ಇಂದು (ಮೇ 5) ಶುರುವಾಗಿದ್ದು ಮೇ 21ರ ತನಕ ಮೂರು ಹಂತಗಳಲ್ಲಿ ನಡೆಯಲಿದೆ. ಈ ಸಮೀಕ್ಷೆ ನಡೆಸುವವರು ಪರಿಶಿಷ್ಟ ಜಾತಿಯವರ ಮನೆ-ಮನೆಗೆ ಭೇಟಿ ನೀಡಿ ದತ್ತಾಂಶ ಸಂಗ್ರಹಿಸುವುದಕ್ಕೆ ಅನುಕೂಲವಾಗುವಂತೆ ಸರ್ಕಾರ ಆ್ಯಂಡ್ರಾಯ್ಡ್ ಆ್ಯಪ್ ಅಭಿವೃದ್ಧಿಪಡಿಸಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನದಾಸ್ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸು ಪ್ರಕಾರ, ಈ ಸಮೀಕ್ಷೆಯಲ್ಲಿ ಜಾತಿ ತಾರತಮ್ಯದ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಅದರ ಆಧಾರದ ಮೇಲೆ ಒಳಮೀಸಲು ಸೌಲಭ್ಯ ಕಲ್ಪಿಸುವುದಕ್ಕೆ ಸರ್ಕಾರ ಚಿಂತನೆ ನಡೆಸಿದೆ.
ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆಗೆ ಒಳಪಡುವವರು ಆಧಾರ್/ಪಡಿತರ ಚೀಟಿ ನೀಡಿ ನೋಂದಣಿ ಮಾಡಿಕೊಂಡ ನಂತರ ಅವರ ಮತ್ತು ಕುಟುಂಬದವರ ವೈಯಕ್ತಿಕ ವಿವರ ಒದಗಿಸಬೇಕಾಗುತ್ತದೆ. ಕುಟುಂಬದ ಸದಸ್ಯರ ವಿವರ, ಶೈಕ್ಷಣಿಕ, ಆರ್ಥಿಕ, ಔದ್ಯೋಗಿಕ, ಸರ್ಕಾರಿ ಸವಲತ್ತುಗಳು, ಮೂಲಸೌಕರ್ಯಗಳು ಸೇರಿ ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.