ಭಾರತ, ಫೆಬ್ರವರಿ 10 -- ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ನಡೆಸುವ ಪರೀಕ್ಷಾ ಪೇ ಚರ್ಚಾ (PPC 2025) ಕಾರ್ಯಕ್ರಮದ ಎಂಟನೇ ಆವೃತ್ತಿಯು ಇಂದು (ಫೆ. 10, ಸೋಮವಾರ) ನಡೆಯುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಅವರು ಬೋರ್ಡ್ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಾಗೂ ಶಿಕ್ಷಕರೊಂದಿಗೆ ಲೈವ್ ಸೆಷನ್‌ನಲ್ಲಿ ಮಾತನಾಡಲಿದ್ದಾರೆ. ಈ ಬಾರಿ ಪ್ರಧಾನಿ ಮೋದಿ ಜತೆಗೆ ಆಧ್ಯಾತ್ಮಿಕ ಗುರು ಸದ್ಗುರು, ಬಾಲಿವುಡ್ ಸ್ಟಾರ್‌ಗಳಾದ ದೀಪಿಕಾ ಪಡುಕೋಣೆ ಮತ್ತು ವಿಕ್ರಾಂತ್ ಮಾಸ್ಸಿ, ಬಾಕ್ಸರ್‌ ಮೇರಿ ಕೋಮ್ ಮತ್ತು ಪ್ಯಾರಾಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅವನಿ ಲೆಖಾರಾ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮೈ ಗವರ್ನ್‌ಮೆಂಟ್‌ ವೆಬ್‌ ಪೋರ್ಟಲ್‌ನಲ್ಲಿ ನೀಡಲಾದ ಮಾಹಿತಿಯ ಪ್ರಕಾರ, ಈ ವರ್ಷ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲು ದೇಶದಾದ್ಯಂತ 3.30 ಕೋಟಿ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ. ಇವರೊಂದಿಗೆ 20.71 ಲಕ್ಷಕ್ಕೂ ಹೆಚ್ಚು ಶಿಕ್ಷಕ...