ಭಾರತ, ಏಪ್ರಿಲ್ 8 -- ವಿಶಾಖಪಟ್ಟಣ: ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಾರಣದಿಂದ 30 ವಿದ್ಯಾರ್ಥಿಗಳು ತಮ್ಮ ಜೆಇಇ ಮುಖ್ಯ ಪರೀಕ್ಷೆಗೆ ತಡವಾಗಿ ಹೋಗಿದ್ದಾರೆ ಎಂದು ವರದಿಯಾಗಿದೆ. ಪವನ್ ಕಲ್ಯಾಣ್ ಅವರು ಗೋಪಾಲಪಟ್ಟಣಂ - ಪೆಂಡುರ್ತಿ ಮಾರ್ಗವಾಗಿ ಅವರು ಸಾಗುತ್ತಿದ್ದ ಕಾರಣ ಆ ರಸ್ತೆಯಲ್ಲಿ ಸಂಚಾರ ನಿರ್ಬಂಧ ಮಾಡಲಾಗಿತ್ತು. ಆ ಕಾರಣದಿಂದಲೇ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ವಿಳಂಬವಾಗಿದೆ ಎಂದು ಹೇಳಲಾಗಿದೆ. ಪವನ್ ಕಲ್ಯಾಣ್ ಸಂಚಾರ ಮಾಡುವ ಸಂದರ್ಭದಲ್ಲಿ ವಿಧಿಸಲಾದ ಸಂಚಾರ ನಿರ್ಬಂಧಗಳಿಂದಾಗಿ ಪರೀಕ್ಷೆ ಬರೆಯುವುದರಿಂದ ವಿದ್ಯಾರ್ಥಿಗಳು ವಂಚಿತರಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ವಿಳಂಬವಾದ ಕಾರಣ ಪರೀಕ್ಷೆ ಬರೆಯಲಾಗದ ವಿದ್ಯಾರ್ಥಿಗಳು ತಮಗಾಗಿ ಮತ್ತೊಮ್ಮೆ ಪರೀಕ್ಷೆ ಮಾಡುವಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ರಾಜ್ಯ ಸರ್ಕಾರ ವಿನಂತಿಸಬೇಕೆಂದು ವಿದ್ಯಾರ್ಥಿಗಳು ಮತ್ತು ಪಾಲಕರು ಒತ್ತಾಯಿಸಿದ್ದಾರೆ.

ಪವನ್ ಕಲ್ಯಾಣ್ ಅವರ ಕಚೇರಿಯ ಪ್ರಕಟಣೆಯ ಪ್ರಕಾರ, ಘಟನೆಗೆ ಸಂಬಂಧಿಸಿದ ಈ ವಿಚಾರವನ್ನು ಖಚಿತಪ...