ಭಾರತ, ಏಪ್ರಿಲ್ 23 -- ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರಿಂದ ನಡೆದ ಹತ್ಯಾಕಾಂಡದ ಕುರಿತು ಜನರು ಆಕ್ರೋಶ, ದುಃಖ ವ್ಯಕ್ತಪಡಿಸುತ್ತಿದ್ದಾರೆ. ಕನ್ನಡ ನಟ ಕಿಚ್ಚ ಸುದೀಪ್‌ ಕೂಡ ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ದುಃಖ ವ್ಯಕ್ತಪಡಿಸಿದ್ದಾರೆ. "ಪಹಲ್ಗಾಮ್‌ನಲ್ಲಿ ಮುಗ್ಧ ಪ್ರವಾಸಿಗರ ಮೇಲೆ ನಡೆದ ಕ್ರೂರ ದಾಳಿ ಹೃದಯ ವಿದ್ರಾವಕ. ಇದು ಕೇವಲ ವ್ಯಕ್ತಿಗಳ ಮೇಲಿನ ದಾಳಿಯಲ್ಲ, ಬದಲಾಗಿ ನಮ್ಮ ರಾಷ್ಟ್ರದ ಚೈತನ್ಯದ ಮೇಲಿನ ದಾಳಿ. ಇದು ಸಂಯಮದ ಸಮಯವಲ್ಲ, ಬಲವಾದ ಮತ್ತು ಸ್ಪಷ್ಟವಾದ ಪ್ರತಿಕ್ರಿಯೆ ನೀಡುವ ಸಮಯ" ಎಂದು ಕಿಚ್ಚ ಸುದೀಪ್‌ ಟ್ವೀಟ್‌ ಮಾಡಿದ್ದಾರೆ.

ಇಷ್ಟು ಮಾತ್ರವಲ್ಲದೆ ಇಂತಹ ಕ್ರೂರ ಕೃತ್ಯ ಎಸಗಿದವರ ಮೇಲೆ ಕಠಿಣ ಕ್ರಮಕೈಗೊಳ್ಳಬೇಕೆಂದು ನರೇಂದ್ರ ಮೋದಿ, ಅಮಿತ್‌ ಶಾ. ರಾಜನಾಥ್‌ ಸಿಂಗ್‌ ಬಳಿ ಮನವಿ ಮಾಡಿದ್ದಾರೆ. "ಪ್ರಧಾನಿ ನರೇಂದ್ರ ಮೋದಿ,ಅಮಿತ್‌ ಶಾ, ರಾಜನಾಥ್‌ ಸಿಂಗ್‌ ಅವರು ಈ ಹೇಡಿತನದ ಕೆಲಸ ಮಾಡಿದವರ ವಿರುದ್ಧ ತ್ವರಿತವಾಗಿ ಮತ್ತು ಕಠಿಣವಾಗಿ ಕ್ರಮಕೈಗೊಳ್ಳಬೇಕು" ಎಂದು ಸುದೀಪ್‌ ಮನವಿ ಮ...