ಭಾರತ, ಮೇ 6 -- ಜಮ್ಮು-ಕಾಶ್ಮೀರದ ಪಹಲ್ಗಾಮ್ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಉಗ್ರ ದಾಳಿಯನ್ನು ಬೆಂಬಲಿಸಿ ಮಾತನಾಡುತ್ತಿರುವ ಪಾಕಿಸ್ತಾನ, ಪಹಲ್ಗಾಮ್ ದಾಳಿಗೆ ಕುಮ್ಮಕ್ಕು ನೀಡಿರುವುದು ಖಚಿತವಾದ ಹಿನ್ನೆಲೆಯಲ್ಲಿ ಭಾರತ ರಾಜತಾಂತ್ರಿಕ ಕ್ರಮಗಳನ್ನು ತೆಗೆದುಕೊಂಡಿದೆ. ಭಾರತ- ಪಾಕಿಸ್ತಾನ ಯುದ್ಧ ಸನ್ನಿವೇಶ ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಂಯಮ ಕಾಯ್ದುಕೊಳ್ಳುವಂತೆ ಎರಡೂ ದೇಶಗಳ ಸರ್ಕಾರಕ್ಕೆ ಮನವಿ ಮಾಡಿದೆ. ಅಲ್ಲದೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಸಭೆಯಲ್ಲಿ ಇಂದು (ಮೇ 6) ಗುಪ್ತ ಸಮಾಲೋಚನೆ ನಡೆದಿದ್ದು, ಪಾಕಿಸ್ತಾನಕ್ಕೆ ಹಲವು ಕಠಿಣ ಪ್ರಶ್ನೆಗಳು ಎದುರಾದವು ಎಂದು ಸುದ್ದಿ ಸಂಸ್ಥೆಗಳಾದ ಎಎನ್ಐ ಮತ್ತು ಪಿಟಿಐ ವರದಿ ಮಾಡಿವೆ.
ಪಹಲ್ಗಾಮ್ ದಾಳಿಯಲ್ಲಿ 26 ನಾಗರಿಕರು ಮೃತಪಟ್ಟಿದ್ದು, ಈ ವಿಚಾರ ವಿಶ್ವಸಂಸ್ಥೆ ಭದ್ರತಾ ಮಂಡಳಿ ಸಭೆಯಲ್ಲಿ ಭಾರಿ ಚರ್ಚೆಗೆ ಗ್ರಾಸವಾಯಿತು. ಸದಸ್ಯ ರಾಷ್ಟ್ರಗಳು ಪಾಕಿಸ್ತಾನ ಮೂಲದ ಉಗ್ರ ಸಂಘಟನೆ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.