Bangalore, ಮೇ 2 -- ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಕರ್ನಾಟಕದವೂ ಸೇರಿ 26 ಮಂದಿ ಪ್ರವಾಸಿಗರನ್ನು ಬಲಿ ತೆಗದುಕೊಂಡ ಪ್ರಕರಣಕ್ಕೆ ಇಡೀ ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ದೇಶದ ಉದ್ದಗಲಕ್ಕೂ ಪಾಕಿಸ್ತಾನದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸರ್ಕಾರವೂ ಪಾಕ್‌ ಗೆ ತಕ್ಕ ಪಾಠ ಕಲಿಸಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಈ ವಿಷಯದಲ್ಲಿ ಕರ್ನಾಟಕವೂ ಹಿಂದೆ ಬಿದ್ದಿಲ್ಲ. ಏಷ್ಯಾಖಂಡದ 2ನೇ ಅತೀದೊಡ್ಡ ಟೊಮ್ಯಾಟೋ ಮಾರುಕಟ್ಟೆ ಕೋಲಾರದಿಂದ ಟೊಮೆಟೊ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ದುಬೈ ಸೇರಿದಂತೆ ವಿವಿಧ ದೇಶಗಳಿಗೆ ರಫ್ತಾಗುತ್ತದೆ.ಆದರೆ ಈ ವರ್ಷ ಟೊಮೆಟೊ ಬೆಳೆಗಾರರು ಮತ್ತು ವ್ಯಾಪಾರಿಗಳು ನೆರೆಯ ಪಾಕಿಸ್ತಾನಕ್ಕೆ ಟೊಮೆಟೊ ರಫ್ತು ಮಾಡದಿರಲು ನಿರ್ಧರಿಸಿದ್ದಾರೆ. ಭಾರತ-ಪಾಕಿಸ್ತಾನ ಗಡಿಗೆ ತೆರಳಬೇಕಿದ್ದ ಲಾರಿಗಳು ಖಾಲಿ ನಿಂತಿವೆ.

ಭಾರತವನ್ನು ಪಾಕಿಸ್ತಾನ ಪದೇ ಪದೇ ಕೆಣಕುತ್ತಿದೆ. ಇದನ್ನು ಭಾತೀಯರಾದ ನಾವು ಸಹಿಸಲು ಸಾಧ್ಯವಿಲ್ಲ. ಪಾಕ್‌ ಗೆ ಟ...