Bengaluru, ಮೇ 4 -- ನವದೆಹಲಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ಸಚಿವ ಬಿಲಾವಲ್ ಭುಟ್ಟೋ ಅವರ ಎಕ್ಸ್ ಖಾತೆಗಳನ್ನು ಭಾರತದಲ್ಲಿ ನಿರ್ಬಂಧಿಸಲಾಗಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆಯ ಮಧ್ಯೆ ಈ ಕ್ರಮ ಕೈಗೊಳ್ಳಲಾಗಿದೆ. ಕಾನೂನು ಕ್ರಮದ ಪ್ರತಿಕ್ರಿಯೆಯಾಗಿ ಇಬ್ಬರೂ ಪಾಕಿಸ್ತಾನಿ ರಾಜಕಾರಣಿಗಳ ಎಕ್ಸ್ ಖಾತೆಗಳನ್ನು ಭಾರತದಲ್ಲಿ ತಡೆಹಿಡಿಯಲಾಗಿದೆ. ಈ ವಾರದ ಆರಂಭದಲ್ಲಿ, ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರವು ಹನಿಯಾ ಅಮೀರ್, ಮಹಿರಾ ಖಾನ್ ಮತ್ತು ಅಲಿ ಜಾಫರ್ ಸೇರಿದಂತೆ ಭಾರತದಲ್ಲಿನ ಹಲವಾರು ಪಾಕಿಸ್ತಾನಿ ನಟರ ಇನ್ಸ್ಟಾಗ್ರಾಮ್ ಖಾತೆಗಳನ್ನು ನಿರ್ಬಂಧಿಸಿತ್ತು. ಈಗ ರಾಜಕಾರಣಿಗಳ ಎಕ್ಸ್ ಖಾತೆಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಇಮ್ರಾನ್ ಖಾನ್ ಮತ್ತು ಬಿಲಾವಲ್ ಭುಟ್ಟೋ ಎಕ್ಸ್ ಖಾತೆಗಳು ಭಾರತದಲ್ಲಿ ಲಭ್ಯವಿಲ್ಲ ಎಂಬ ಸ್ವಯಂಚಾಲಿತ ಸಂದೇಶವನ್ನು ಎಕ್ಸ್‌ನಲ್ಲಿ ಪ್ರದರ್ಶಿಸಲಾಗುತ್ತಿದೆ. ಅಲ್ಲದೆ, ಈ ವಾರದ ಆರಂಭದಲ್ಲಿ...
Click here to read full article from source
To read the full article or to get the complete feed from this publication, please
Contact Us.