ಭಾರತ, ಏಪ್ರಿಲ್ 24 -- ಭಾರತದಲ್ಲಿ ಐಪಿಎಲ್‌ ಟೂರ್ನಿ ನಡೆಯುತ್ತಿರುವಾಗಲೇ ಪಾಕಿಸ್ತಾನದಲ್ಲಿ ಐಪಿಎಲ್‌ನಂತೆಯೇ ಪಿಎಸ್‌ಎಲ್‌ ಟೂರ್ನಿ ನಡೆಯುತ್ತಿದೆ. ಭಾರತದಲ್ಲಿ ಈ ಟೂರ್ನಿಯು ಫ್ಯಾನ್‌ಕೋಡ್ ಮೂಲಕ ಲೈವ್‌ ಸ್ಟ್ರೀಮಿಂಗ್‌ ಆಗುತ್ತಿತ್ತು. ಇದೀಗ ಭಾರತೀಯ ಲೈವ್ ಸ್ಟ್ರೀಮಿಂಗ್ ವೇದಿಕೆಯು, ಮುಂಬರುವ ಪಾಕಿಸ್ತಾನ ಸೂಪರ್ ಲೀಗ್ ಪಂದ್ಯಗಳನ್ನು ಪ್ರಸಾರ ಮಾಡುವುದಿಲ್ಲ. ಇದಕ್ಕೆ ಕಾರಣ ಪಹಲ್ಗಾಮ್‌ ಭಯೋತ್ಪಾದಕ ದಾಳಿ. ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗಷ್ಟೇ 26 ಜನರನ್ನು ಬಲಿ ತೆಗೆದುಕೊಂಡ ಮಾರಣಾಂತಿಕ ಉಗ್ರ ದಾಳಿಯ ಬೆನ್ನಲ್ಲೇ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಪಹಲ್ಗಾಮ್‌ ದಾಳಿಯ ನಂತರ ಭಾರತವು ಪಾಕಿಸ್ತಾನ ವಿರುದ್ಧ ನಿಷ್ಠುರ ಧೋರಣೆ ಕೈಗೊಳ್ಳುತ್ತಿದೆ. ಪಾಕಿಸ್ತಾನವು ಭಯೋತ್ಪಾದನೆ ಬೆಂಬಲಿಸುತ್ತಿದೆ ಎಂದು ಹಲವು ವರ್ಷಗಳಿಂದ ಭಾರತ ಆರೋಪಿಸುತ್ತಿದೆ. ಆದರೂ ಉಗ್ರ ಚಟುವಟಿಕೆ ಕಾಶ್ಮೀರದಲ್ಲಿ ಮತ್ತೆ ಮತ್ತೆ ಬೆಳಕಿಗೆ ಬರುತ್ತಿದೆ. ಈ ಬಾರಿ ಅಮಾಯಕರು ಪ್ರಾಣ ಕಳೆದುಕೊಂಡ ಬೆನ್ನಲ್ಲೇ, ಕೇಂದ್ರ ಸರ್ಕಾರ ಕೆಂಡವಾಗಿದೆ. ಪ...