Bengaluru, ಮೇ 20 -- ಇಸ್ಲಾಮಾಬಾದ್: ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ಅವರನ್ನು ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡುವ ಪ್ರಸ್ತಾಪಕ್ಕೆ ಪಾಕಿಸ್ತಾನದ ಕ್ಯಾಬಿನೆಟ್ ಮಂಗಳವಾರ ಅನುಮೋದನೆ ನೀಡಿದೆ ಎಂದು ಪ್ರಧಾನಿ ಕಚೇರಿಯ ಹೇಳಿಕೆಯನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಭಾರತದೊಂದಿಗಿನ ಸಂಘರ್ಷದಲ್ಲಿ ಅಸಿಮ್ ಮುನೀರ್ ಅವರ ಕಾರ್ಯನಿರ್ವಹಣೆ ಬಗ್ಗೆ ಪಾಕಿಸ್ತಾನದಲ್ಲಿ ಮೆಚ್ಚುಗೆ ವ್ಯಕ್ತಪಡಿಸಲಾಗಿದ್ದು, ಅದಾದ ಬಳಿಕ ಅವರಿಗೆ ಫೀಲ್ಡ್ ಮಾರ್ಷಲ್ ಹುದ್ದೆಗೆ ಬಡ್ತಿ ನೀಡಲಾಗಿದೆ.
ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನತೆ ಹೆಚ್ಚಾದಾಗ, ಪಾಕಿಸ್ತಾನವು ಶಾಂತಿಯನ್ನು ಬಯಸುತ್ತದೆಯಾದರೂ, ತಮ್ಮ ರಾಷ್ಟ್ರೀಯ ಪ್ರತಿಷ್ಠೆಯನ್ನು ರಕ್ಷಿಸಲು ಯಾವುದೇ ಕ್ರಮ ತೆಗೆದುಕೊಳ್ಳಲು ಹಿಂಜ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.