ಭಾರತ, ಮಾರ್ಚ್ 10 -- ದುಬೈ ಇಂಟರ್​​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಗೆಲುವಿನ ನಂತರ ಟ್ರೋಫಿ ವಿತರಣಾ ಸಮಾರಂಭದಲ್ಲಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಯಾವುದೇ ಸದಸ್ಯರು ಇಲ್ಲದಿರುವುದಕ್ಕೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಆಘಾತ ವ್ಯಕ್ತಪಡಿಸಿದ್ದಾರೆ. ಐಸಿಸಿ ಅಧ್ಯಕ್ಷ ಜಯ್ ಶಾ, ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಪದಕಗಳನ್ನು ಪ್ರದಾನ ಮಾಡುವಾಗ ವೇದಿಕೆಯಲ್ಲಿದ್ದರು. ಆದರೆ ಪಿಸಿಬಿ ಸದಸ್ಯರು ಇರಲಿಲ್ಲ.

ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ನಾಲ್ಕು ವಿಕೆಟ್​ಗಳ ಗೆಲುವು ಸಾಧಿಸಿದ ಭಾರತ ದಾಖಲೆಯ ಮೂರನೇ ಚಾಂಪಿಯನ್ಸ್ ಟ್ರೋಫಿ ಪ್ರಶಸ್ತಿಗೆ ಮುತ್ತಿಕ್ಕಿತು. ಬಳಿಕ ವಿಜೇತರಿಗೆ, ರನ್ನರ್​ಅಪ್, ಪಂದ್ಯಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿ ನೀಡಲಾಯಿತು. ಆದರೆ ಪ್ರಶಸ್ತಿ ವಿತರಣಾ ವೇದಿಕೆಯಲ್ಲಿ ಚಾಂಪಿಯನ್ಸ್ ಟ್ರೋಫಿಗೆ ಆತಿಥ್ಯ ವಹಿಸಿದ ಪಾಕಿಸ್ತಾನ ಪರ ಯಾರೂ ಯಾವುದೇ ಪ್ರತಿನಿಧಿ ಇರಲಿಲ್ಲ. ಇದು ಶೋಯೆಬ್ ಅಖ್ತರ್ ಸೇರಿ ತ...