ಭಾರತ, ಫೆಬ್ರವರಿ 23 -- ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅದರಂತೆ ರೋಹಿತ್​ ಪಡೆ ಚೇಸಿಂಗ್ ಮಾಡಲಿದೆ. ಸೋತಿರುವ ಮತ್ತು ಗೆದ್ದಿರುವ ತಂಡಗಳ ನಡುವೆ ಸೆಣಸಾಟ ಸಾಕಷ್ಟು ಕುತೂಹಲ ಮೂಡಿಸಿದ್ದು, ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನವು ಮಹತ್ವದ ಪಂದ್ಯಕ್ಕೆ ಆತಿಥ್ಯ ವಹಿಸುತ್ತಿದೆ. ಪಾಕಿಸ್ತಾನ ಪ್ಲೇಯಿಂಗ್ 11ನಲ್ಲಿ ಒಂದು ಬದಲಾವಣೆಯಾಗಿದೆ. ಗಾಯಗೊಂಡು ಹೊರಬಿದ್ದ ಫಖಾರ್ ಜಮಾನ್ ಜಾಗಕ್ಕೆ ಇಮಾಮ್-ಉಲ್-ಹಕ್ ಆಯ್ಕೆಯಾಗಿದ್ದಾರೆ.

ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್.

ಇಮಾಮ್-ಉಲ್-ಹಕ್, ಬಾಬರ್ ಅಜಮ್, ಸೌದ್ ಶಕೀಲ್, ಮೊಹಮ್ಮದ್ ರಿಜ್ವಾನ್ (ನಾಯಕ, ವಿಕೆಟ್ ಕೀಪರ್​), ಸಲ್ಮಾನ್ ಆಘಾ, ತಯ್ಯಬ್ ತಾಹಿರ್, ಖುಶ್ದಿಲ್ ಶಾ...