ಭಾರತ, ಮೇ 19 -- ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದ ನಂತರ, ಕ್ರಿಕೆಟ್ ವಿಷಯವಾಗಿಯೂ ಭಾರತ ಪಾಕಿಸ್ತಾನ ವಿರುದ್ಧ ಕಠಿಣ ನಿರ್ಧಾರಕ್ಕೆ ಬರುತ್ತಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಆಯೋಜಿಸುವ ಎಲ್ಲಾ ಪಂದ್ಯಾವಳಿಗಳಿಂದ ಹೊರಗುಳಿಯಲು ಮುಂದಾಗಿದೆ. ಆ ಮೂಲಕ ಪಾಕಿಸ್ತಾನ ಕ್ರಿಕೆಟ್ ಅನ್ನು ಪ್ರತ್ಯೇಕಿಸಲು ಮುಂದಾಗಿದೆ. ಭಯೋತ್ಪಾದನೆಯನ್ನು ಪೋಷಿಸುವ ಪಾಕಿಸ್ತಾನ ಸಣ್ಣತನಕ್ಕೆ ಧಿಕ್ಕಾರವಾಗಿ ಈ ಕ್ರಮ ಕೈಗೊಳ್ಳಲು ಮುಂದಾಗಿದೆ. ಮುಂದಿನ ದಿನಗಳಲ್ಲಿ ಪಾಕಿಸ್ತಾನಕ್ಕೆ ಇದರಿಂದ ದೊಡ್ಡ ಪೆಟ್ಟು ಬೀಳುವುದು ಸ್ಪಷ್ಟ.
ಮುಂದಿನ ತಿಂಗಳು ಶ್ರೀಲಂಕಾದಲ್ಲಿ ನಡೆಯಲಿರುವ ವನಿತೆಯರ ಉದಯೋನ್ಮುಖ ತಂಡಗಳ ಏಷ್ಯಾಕಪ್ ಮತ್ತು ಸೆಪ್ಟೆಂಬರ್ನಲ್ಲಿ ನಡೆಯಲಿರುವ ಪುರುಷರ ಏಷ್ಯಾಕಪ್ನಿಂದ ಹಿಂದೆ ಸರಿಯುವ ನಿರ್ಧಾರದ ಬಗ್ಗೆ ಬಿಸಿಸಿಐ ಈಗಾಗಲೇ ಎಸಿಸಿಗೆ ಮಾಹಿತಿ ನೀಡಿದೆ ಎಂದು ಸುದ್ದಿಸಂಸ್ಥೆ ಇಂಡಿಯನ್ ಎಕ್ಸ್ಪ್ರೆಸ್ ವರದಿ ಮಾಡಿದೆ. ಇದರಲ್ಲಿ ಪುರುಷರ ಏಷ್ಯಾಕಪ್...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.