ಭಾರತ, ಫೆಬ್ರವರಿ 4 -- Bengaluru Traffic Police: ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸಿದರೆ ಅಂಥವರಿಗೆ ಭಾರಿ ದಂಡ ವಿಧಿಸುವುದಲ್ಲದೆ, ಚಾಲನಾ ಪರವಾನಗಿ (ಡ್ರೈವಿಂಗ್ ಲೈಸೆನ್ಸ್ ) ರದ್ದುಗೊಳಿಸಲು ಶಿಫಾರಸು ಮಾಡುವುದಾಗಿ ಬೆಂಗಳೂರು ಸಂಚಾರ ಪೊಲೀಸರು ಖಡಕ್ ವಾರ್ನಿಂಗ್ ನೀಡಿದ್ದಾರೆ. ಸಾಮಾನ್ಯವಾಗಿ ಸಂಚಾರ ದಟ್ಟಣೆ ಎದುರಾದ ವೇಳೆ ಅನೇಕರು ಪಾದಚಾರಿ ಮಾರ್ಗದಲ್ಲಿ ವಾಹನ ಚಲಾಯಿಸುವ ಪರಿಪಾಠ ಬೆಳೆಸಿಕೊಂಡಿದ್ದಾರೆ. ಇದಕ್ಕೆ ತಕ್ಕ ಪಾಠ ಕಲಿಸಲು ಸಂಚಾರ ಪೊಲೀಸರು ಮುಂದಾಗಿದ್ದಾರೆ. ಇದರ ಭಾಗವಾಗಿ ಈಗ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.

ಬೆಂಗಳೂರು ನಗರ ಸಂಚಾರ ಪೊಲೀಸರು ಸಂಚಾರ ನಿಯಮಗಳ ಬಗ್ಗೆ ಪ್ರತಿನಿತ್ಯ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಸಂಚಾರ ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೂ ಸಹ ಅನೇಕರು ಸಂಚಾರ ನಿಯಮಗಳನ್ನು ಗಾಳಿಗೆ ತೂರಿ ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುತ್ತಿರುವುದನ್ನು ಸಂಚಾರ ಪೊಲೀಸರು ಗಮನಿಸಿದ್ದಾರೆ. ಹೀಗಾಗಿ, ಬೆಂಗಳೂರು ನಗರ ಸಂಚಾರ ವಿಭಾಗದ ಹಿರಿಯ ಪೊಲೀಸ್‌ ಅಧಿಕಾರ...