ಭಾರತ, ಮಾರ್ಚ್ 4 -- ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಗ್ರೂಪ್ ಹಂತದ ಅಂತಿಮ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧಜಾ ಭಾರತ 44 ರನ್‌ಗಳಿಂದ ಗೆದ್ದು ಬೀಗಿತು. ಎ ಗುಂಪಿನಲ್ಲಿ ಅಗ್ರಸ್ಥಾನಿಯಾಗಿ ಸೆಮಿಫೈನಲ್‌ ಪ್ರವೇಶಿಸಿದ ಟೀಮ್‌ ಇಂಡಿಯಾ, ಇಂದು (ಮಾ.4 ಮಂಗಳವಾರ) ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಆಡುತ್ತಿದೆ. ಕಿವೀಸ್‌ ವಿರುದ್ಧ ನಾಲ್ವರು ಸ್ಪಿನ್ನರ್‌ಗಳನ್ನು ಆಡಿಸಿ ಯಶಸ್ವಿಯಾಗಿದ್ದ ತಂಡವು, ಕಾಂಗರೂಗಳ ವಿರುದ್ಧವೂ ಅದೇ ತಂತ್ರ ಅನುಸರಿಸುತ್ತಾ ಎಂಬ ಪ್ರಶ್ನೆ ಅಭಿಮಾನಿಗಳಿಗಿದೆ. ಈ ಬಗ್ಗೆ ತಂಡದ ಆಡಳಿತ ಮಂಡಳಿ ನಿರ್ಧರಿಸುತ್ತದೆ ಎಂದು ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಹೇಳಿದ್ದಾರೆ.

ಪಂದ್ಯದ ಪಿಚ್ ಹಾಗೂ ಹವಾಮಾನ ಪರಿಸ್ಥಿತಿಗಳನ್ನು ನೋಡಿದ ನಂತರ ಬೌಲಿಂಗ್ ಆಯ್ಕೆಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹಿಟ್‌ಮ್ಯಾನ್‌ ಹೇಳಿದ್ದಾರೆ. ಕಿವೀಸ್ ವಿರುದ್ಧದ ಪಂದ್ಯದಲ್ಲಿ ಭಾರತ ನಾಲ್ವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸಿತು. ನಾಲ್ಕು ಸ್ಪಿನ್ನರ್‌ಗಳನ್ನು ಆಡುವ ಬಳಗದಲ್ಲಿ ಸಂಯೋಜಿ...