ಭಾರತ, ಮೇ 16 -- ದ್ವಿತೀಯ ಪಿಯುಸಿ ಫಲಿತಾಂಶ 2025: ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ 1ರಲ್ಲಿ ಫಲಿತಾಂಶ ಪೂರ್ಣಗೊಂಡಿರದ 1,53,620 ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆದಿದ್ದರು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ದ್ವಿತೀಯ ಪಿಯು ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿದ್ದ 1.70 ಲಕ್ಷ ವಿದ್ಯಾರ್ಥಿಗಳಲ್ಲಿ 1.57 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ 2ಕ್ಕೆ ನೋಂದಾಯಿಸಿಕೊಂಡಿದ್ದರು. ಪರೀಕ್ಷಾ ಶುಲ್ಕ ಇಲ್ಲದೇ ನೋಂದಣಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅವಕಾಶ ನೀಡಿದ ಕಾರಣ ಶೇ 92.4ರಷ್ಟು ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. 71,964 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗೆ ಹಾಜರಾಗಿದ್ದರು.

ದ್ವಿತೀಯ ಪಿಯುಸಿ ಪರೀಕ್ಷೆ 2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದ 1,94,077 ವಿದ್ಯಾರ್ಥಿಗಳ ಪೈಕಿ 60,692 ವಿದ್ಯಾರ್ಥಿಗಳು ಉತ್ತೀರ್ಣರಾಗ...