ಭಾರತ, ಮಾರ್ಚ್ 1 -- ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಫರಂಗಿಪೇಟೆ ಸಮೀಪದ ಕಿದೆಬೆಟ್ಟು ಪದ್ಮನಾಭ ಎಂಬವರ ಪುತ್ರ, ಪಿಯುಸಿ ವಿದ್ಯಾರ್ಥಿ ದಿಗಂತ್ ಅವರ ನಿಗೂಢ ನಾಪತ್ತೆ ಪ್ರಕರಣಕ್ಕೆ ಮತ್ತೆ ಜೀವ ಬಂದಿದೆ. ಬಾಲಕ ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಸರ್ಕಾರದ ಮೇಲೆ ಒತ್ತಡ ಹಾಕಲು ಫರಂಗಿಪೇಟೆ ಜಂಕ್ಷನ್‌ನಲ್ಲಿ ಇಂದು (ಮಾ.1) ಪ್ರತಿಭಟನೆ ನಡೆಸಲಾಯಿತು. ಕೆಲಕಾಲ ಪೇಟೆ ಬಂದ್ ಮಾಡಿ ಬಾಲಕನ ಪತ್ತೆಗೆ ಒತ್ತಾಯ ಮಾಡಲಾಯಿತು. ಈ ಸಂದರ್ಭ ಜಾತಿ, ಮತ, ಧರ್ಮದ ಚೌಕಟ್ಟು ಮೀರಿ ಸರ್ವ ಧರ್ಮೀಯರು ಪ್ರತಿಭಟನೆಯಲ್ಲಿ ಭಾಗಿಯಾದರು. ಅಂಗಡಿ-ಮಳಿಗೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯತೀಶ್ ಎನ್ ಮಾತನಾಡಿ, ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ. ಕ್ಲಿಷ್ಟಕರವಾದ ಪ್ರಕರಣಗಳಿಗೆ ಸ್ವಲ್ಪ ಸಮಯ ಬೇಕಾಗುತ್ತದೆ. ಜಿಲ್ಲೆಯ ವಿವಿಧ ಠಾಣೆಯ ನುರಿತ ಪೊಲೀಸರನ್ನು ಕರೆಸಿ ತನಿಖೆ ಹೆಚ್ಚಿಸಿದ್ದೇವೆ. ದಿಗಂತ್ ಪತ್ತೆಯಾಗುವವರೆಗೆ ನಾವು ಸುಮ್ಮನೆ ಕೂರುವುದಿಲ್ಲ. ನಿಮ್ಮಲ್ಲಿ ಮಾಹಿತ...