ಭಾರತ, ಜೂನ್ 4 -- ಮಂಗಳೂರು: ಪುತ್ತೂರಿನಲ್ಲಿ ಏಳನೇ ವರುಷದ ಹಲಸು-ಹಣ್ಣು ಮೇಳ ಜೂನ್ 6ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ. ನವತೇಜ ಟ್ರಸ್ಟ್ ಪುತ್ತೂರು ಜೊತೆಗೆ ಅನ್ಯಾನ್ಯ ಸಂಸ್ಥೆಗಳ ಸಹಯೋಗ ಹೊಂದಿದೆ. ಈ ಬಾರಿ ಮೇಳದಲ್ಲಿ ಸುಮಾರು ಎಪ್ಪತ್ತು ಮಳಿಗೆಗಳಿಗೆ ಅವಕಾಶ ನೀಡಲಾಗಿದೆ. ಈಗಾಗಲೇ ಎಲ್ಲ ಮಳಿಗೆಗಳು ಪೂರ್ತಿಯಾಗಿ ಬುಕ್ ಆಗಿರುವುದು ಸಂತೋಷದ ವಿಚಾರ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಹೇಳಿದರು.

ಜೂನ್ 6 ರಂದು ಬೆಳಿಗ್ಗೆ 10ಕ್ಕೆ ಮಳಿಗೆಗಳನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಉದ್ಘಾಟಿಸಲಿದ್ದಾರೆ. ಕ್ಯಾಂಪ್ಕೋ ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ, ಕೃಷಿಕ ಮಹದೇವ ಶಾಸ್ತ್ರಿ ಮಣಿಲಾ ಉಪಸ್ಥಿತರಿರುವರು. ಸಂಜೆ 4ಕ್ಕೆ ಮೇಳ ಆರಂಭಗೊಳ್ಳಲಿದ್ದು, ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ ನೇತೃತ್ವ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ ಚಾಲನೆ ನೀಡುವರು. ಅಡಿಕೆ ಪತ್ರ...