Bengaluru, ಮೇ 27 -- ಮಂಗಳೂರು: ಮನೆಯಲ್ಲಿ ನಡೆಯುವ ಶ್ರಾದ್ಧ ಕಾರ್ಯಕ್ರಮಕ್ಕೆ ಮಗಳು ಮತ್ತು ಮೊಮ್ಮಗಳನ್ನು ಕರೆದುಕೊಂಡು ಬರುವಾಗ ಕಾರಿಗೆ ಹಿಂದಿನಿಂದ ಬಸ್ ಡಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ಮಂಗಳವಾರ ಬೆಳಿಗ್ಗೆ ಪುತ್ತೂರು ಹೊರ ವಲಯದ ಮುರದಲ್ಲಿ ನಡೆದಿದೆ.
ಈಶ್ಚರ ಭಟ್ ಎಂಬವರ ಮನೆಯಲ್ಲಿ ಮಂಗಳವಾರ ಶ್ರಾದ್ಧ ಕಾರ್ಯಕ್ರಮ ನಿಗದಿಯಾಗಿತ್ತು. ಬೆಂಗಳೂರಿನಿಂದ ಕಾರ್ಯಕ್ರಮಕ್ಕೆಂದು ಬಸ್ಸಿನಲ್ಲಿ ಪುತ್ತೂರಿಗೆ ಬಂದಿದ್ದ ಮಗಳು ಮತ್ತು ಮೊಮ್ಮಗಳನ್ನು ಕರೆ ತರಲು ಅಂಡೆಪುಣಿ ನಿವಾಸಿ ಈಶ್ವರ ಭಟ್ ಕಾರಿನಲ್ಲಿ ಪುತ್ತೂರು ಬಸ್ ನಿಲ್ದಾಣಕ್ಕೆ ಹೋಗಿದ್ದರು.
ಮರಳಿ ಮನೆಗೆ ಹೋಗುವಾಗ ಮುರದಲ್ಲಿ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಸ್ಥಳದಲ್ಲಿ ಅಪಾಯಕಾರಿ ತಿರುವು ಒಂದಿದ್ದು, ಅದನ್ನು ತೆರವುಗೊಳಿಸಲು ಸ್ಥಳೀಯರು ಈ ಹಿಂದೆ ಪ್ರತಿಭಟನೆ ನಡೆಸಿದ್ದರು. ಇದಕ್ಕೂ ಮೊದಲು ಹಲವು ಬಾರಿ ಇದೇ ಸ್ಥಳದಲ್ಲಿ ಅಪಘಾತಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
Published ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.